AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಲಕ್ಷ ರೂ. ಖರ್ಚು, 3 ತಿಂಗಳ ಪರಿಶ್ರಮ; ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!

16 ಲಕ್ಷ ರೂ. ಖರ್ಚು, 3 ತಿಂಗಳ ಪರಿಶ್ರಮ; ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Oct 09, 2026 | 8:51 AM

Share

ಬೆಂಗಳೂರಿನ ರಾಮಮೂರ್ತಿನಗರ ಸಮೀಪದ ಕಲ್ಕೆರೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮಾದರಿಯಲ್ಲಿ ಭವ್ಯ ಗಣೇಶ ಮಂಟಪ ನಿರ್ಮಿಸಲಾಗಿದೆ. ಅಥರ್ವ ಯುವ ಸೇನೆಯಿಂದ 15-16 ಲಕ್ಷ ರೂಪಾಯಿ ವೆಚ್ಚದಲ್ಲಿ, ಮೂರು ತಿಂಗಳ ಪರಿಶ್ರಮದಿಂದ ನಿರ್ಮಾಣವಾಗಿರುವ ಈ ಮಂಟಪವು ಸಹಸ್ರಾರು ಭಕ್ತರನ್ನು ಆಕರ್ಷಿಸುತ್ತಿದೆ.

ಗೌರಿ ಗಣೇಶ ಹಬ್ಬ ಆರಂಭವಾಗಿ 1 ತಿಂಗಳೇ ಆಗುತ್ತಾ ಬಂದರೂ ಹಬ್ಬದ ಜೋಶ್ ಕಡಿಮೆಯಾಗಿಲ್ಲ. ಬೆಂಗಳೂರಿನ ರಾಮಮೂರ್ತಿನಗರ ಸಮೀಪದ ಕಲ್ಕೆರೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮಾದರಿಯಲ್ಲಿ ಗಣಪತಿ ಮಂಟಪ ನಿರ್ಮಿಸಲಾಗಿದೆ. ಅಥರ್ವ ಯುವ ಸೇನೆಯ ವತಿಯಿಂದ ನಿರ್ಮಿಸಲಾಗಿರುವ ಈ ಮಂಟಪದಲ್ಲಿ ಕೆಂಪು ಮತ್ತು ಚಿನ್ನದ ಬಣ್ಣದ ಕಂಬಗಳು, ಗೋಪುರ ಹಾಗೂ ಧ್ವಜಗಳನ್ನು ಅಳವಡಿಸಲಾಗಿದೆ. ಮಂತ್ರಾಲಯದ ಮಠವನ್ನು ಹೋಲುವಂತೆ ಮಂಟಪದ ವಿನ್ಯಾಸ ರೂಪಿಸಲಾಗಿದೆ. 16 ಲಕ್ಷ ರೂಪಾಯಿ ವೆಚ್ಚದಲ್ಲಿ ಸತತ 3 ತಿಂಗಳ ಪರಿಶ್ರಮದೊಂದಿಗೆ ಸೆಟ್ ಮೂಡಿಬಂದಿದೆ. ಕಳೆದ ವರ್ಷ ಶಬರಿಮಲೆ ಸ್ವಾಮಿ ಅಯ್ಯಪ್ಪ ಅವರ ಮಾದರಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದ ಅಥರ್ವ ಯುವ ಸೇನೆ, ಈ ಬಾರಿ ಮಂತ್ರಾಲಯದ ಮಹಿಮೆಯನ್ನು ಸಾರುವ ಪರಿಕಲ್ಪನೆಯೊಂದಿಗೆ ಭಕ್ತರಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಅನುಭವ ನೀಡಲು ಈ ಸೆಟಪ್ ಅನ್ನು ರಚಿಸಿದೆ. ಈ ವಿಶೇಷ ಮಂಟಪ ಸಹಸ್ರಾರು ಭಕ್ತರ ಗಮನ ಸೆಳೆಯುತ್ತಿದೆ. ನೆನ್ನೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನಡೆದಿದ್ದು, ಭಾನುವಾರ ವಿಸರ್ಜನೆ ನಡೆಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published on: Oct 09, 2026 08:45 AM

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More