ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ: ದಾಳಿಯ ವೇಳೆ ಜಿರಳೆ, ಅವಧಿ ಮೀರಿದ ಮಸಾಲೆ ಪತ್ತೆ

Edited By:

Updated on: Sep 09, 2026 | 5:34 PM

ಗ್ರಾಹಕರ ದೂರುಗಳ ಆಧಾರದ ಮೇಲೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್‌ಡಿಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಅಡುಗೆಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದು, ಜಿರಳೆಗಳ ಓಡಾಟ ಮತ್ತು ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಹೀಗಾಗಿ ಹೋಟೆಲ್ ಅಡುಗೆಮನೆಯನ್ನು ಸೀಜ್ ಮಾಡಲಾಗಿದ್ದು, ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಬೆಂಗಳೂರು, ಸೆ.9: ಗ್ರಾಹಕರಿಂದ ಬಂದ ದೂರುಗಳನ್ನು ಆಧರಿಸಿ, ಆಹಾರ ಮತ್ತು ಔಷಧ ಆಡಳಿತ (FDA) ಅಧಿಕಾರಿಗಳು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸೌತ್ ರುಚೀಸ್ ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಹೋಟೆಲ್‌ನ ಅಡುಗೆಮನೆಯಲ್ಲಿ ವ್ಯಾಪಕ ಸ್ವಚ್ಛತೆ ಕೊರತೆ ಮತ್ತು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದಿದೆ. ಪರಿಶೀಲನೆ ನಡೆಸಿದಾಗ, ಅಡುಗೆಮನೆಯ ಒಳಭಾಗದಲ್ಲಿ ಜಿರಳೆಗಳ ಓಡಾಟ ಸೇರಿದಂತೆ ಹಲವು ಕಡೆಗಳಲ್ಲಿ ಅಸ್ವಚ್ಛತೆ ಇರುವುದು ಸ್ಪಷ್ಟವಾಗಿದೆ. ಇದಲ್ಲದೆ, ಕೊಬ್ಬರಿ ಪುಡಿ, ಸಾಂಬಾರ್ ಪುಡಿ, ರಸಂ ಪುಡಿ, ಮಶ್ರೂಮ್ ಮತ್ತು ಸೌತ್ ರುಚೀಸ್ ಹೆಸರಿನ ಚಟ್ನಿ ಪುಡಿ ಸೇರಿದಂತೆ ಹಲವು ಅವಧಿ ಮೀರಿದ ಆಹಾರ ಪದಾರ್ಥಗಳು ದಾಳಿ ವೇಳೆ ಪತ್ತೆಯಾಗಿವೆ. ಸಂಪೂರ್ಣ ಸ್ವಚ್ಛತೆಯ ಕೊರತೆ ಮತ್ತು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಬಳಸಿ ಗ್ರಾಹಕರ ಆರೋಗ್ಯಕ್ಕೆ ಅಪಾಯ ತರುತ್ತಿರುವ ಕಾರಣ, ಎಫ್‌ಡಿಎ ಆಯುಕ್ತರು ಹೋಟೆಲ್‌ನ ಅಡುಗೆಮನೆಯನ್ನು ತಕ್ಷಣವೇ ಸೀಜ್ ಮಾಡಲು ಆದೇಶಿಸಿದ್ದಾರೆ. ಅವಧಿ ಮೀರಿದ ಹಾಗೂ ತಪ್ಪಾಗಿ ಲೇಬಲ್ ಮಾಡಲಾದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಹೋಟೆಲ್ ಮಾಲೀಕ ಪ್ರದೀಪ್ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More