ಬೆಂಗಳೂರಿಗೆ ಜಲಾಘಾತದ ಭೀತಿ: 142 ಕೆರೆಗಳ ನೀರು ಕುಡಿಯಲು ಅಯೋಗ್ಯ ಎಂದ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ
ಬೆಂಗಳೂರಿನ 142 ಕೆರೆಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಬಹಿರಂಗಪಡಿಸಿದೆ. 50 ಕೆರೆಗಳು ಡಿ ಮತ್ತು 92 ಕೆರೆಗಳು ಇ ವರ್ಗದಲ್ಲಿವೆ. ಕೈಗಾರಿಕಾ ತ್ಯಾಜ್ಯ ಮತ್ತು ಮೋರಿ ನೀರು ಸೇರಿ ಕೆರೆಗಳು ಅತಿ ಹೆಚ್ಚು ಕಲುಷಿತಗೊಂಡಿದ್ದು, ಸಂಸ್ಕರಿಸಿದ ನಂತರವೂ ಕುಡಿಯಲು ಯೋಗ್ಯವಲ್ಲದ ಸ್ಥಿತಿ ತಲುಪಿವೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 26: ಬೇಸಿಗೆ ಆರಂಭಕ್ಕೂ ಮುನ್ನವೇ ಬೆಂಗಳೂರಿಗೆ ಜಲಾಘಾತದ ಭೀತಿ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯ ಪ್ರಕಾರ, ನಗರದ 142 ಕೆರೆಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ತಿಳಿದುಬಂದಿದೆ. ಈ ಕೆರೆಗಳಲ್ಲಿ 50 ಕೆರೆಗಳು ಡಿ ವರ್ಗದಲ್ಲಿದ್ದರೆ, ಉಳಿದ 92 ಕೆರೆಗಳು ಇ ವರ್ಗದಲ್ಲಿವೆ. ಇ ವರ್ಗವೆಂದರೆ ಅತ್ಯಂತ ಕಳಪೆ ಗುಣಮಟ್ಟದ ನೀರನ್ನು ಹೊಂದಿದ್ದು, ಸಂಸ್ಕರಿಸಿದ ನಂತರವೂ ಕುಡಿಯಲು ಯೋಗ್ಯವಲ್ಲ. ಮೋರಿ ನೀರು ಮತ್ತು ಕೈಗಾರಿಕಾ ತ್ಯಾಜ್ಯಗಳು ಕೆರೆಗಳ ಒಡಲು ಸೇರುತ್ತಿರುವುದೇ ಈ ಕಲುಷಿತಕ್ಕೆ ಪ್ರಮುಖ ಕಾರಣವಾಗಿದೆ. ಇದರಿಂದ ಅಂತರ್ಜಲ ಮಟ್ಟವೂ ಕಲುಷಿತಗೊಂಡು, ಜಲಚರಗಳ ಜೀವಕ್ಕೂ ಕುತ್ತು ಬಂದಿದೆ. ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ

