ಸಾರ್ವಜನಿಕರ ಪ್ರಾಣ ತೆಗೆಯಲು ಕಾಯುತ್ತಿದೆ ಈ ರಸ್ತೆ: ತೆರೆದ ಗುಂಡಿಯಲ್ಲಿ ಬಿದ್ದು ಕೈಕಾಲು ಮುರಿದುಕೊಂಡ ಜನ

Edited By:

Updated on: Feb 24, 2026 | 4:43 PM

ದೇವನಹಳ್ಳಿಯಲ್ಲಿ ಬೆಸ್ಕಾಂ ನಿರ್ಲಕ್ಷ್ಯದಿಂದ ಭೂಗತ ಕೇಬಲ್ ಗುಂಡಿಗಳು ತೆರೆದೇ ಇವೆ. ಇದರಿಂದ ಪಾದಚಾರಿಗಳು, ವಾಹನ ಸವಾರರು ನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ. ಯಾವುದೇ ಮುನ್ನೆಚ್ಚರಿಕೆ ಇಲ್ಲದ ಕಾರಣ ರಾತ್ರಿ ವೇಳೆ ಅನೇಕರು ಗಾಯಗೊಂಡಿದ್ದಾರೆ. ಸಾರ್ವಜನಿಕರ ದೂರುಗಳನ್ನು ಬೆಸ್ಕಾಂ ಕಡೆಗಣಿಸಿದೆ. ಕೂಡಲೇ ಈ ಅಪಾಯಕಾರಿ ಗುಂಡಿಗಳನ್ನು ಮುಚ್ಚಿ ಜನರಿಗೆ ಸುಗಮ ಸಂಚಾರ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ದೇವನಹಳ್ಳಿ, ಫೆ.24: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯ ಅತಿರೇಕಕ್ಕೆ ತಲುಪಿದೆ. ಭೂಗತ ಕೇಬಲ್ ಅಳವಡಿಕೆ ಹೆಸರಿನಲ್ಲಿ ಪಟ್ಟಣದ ಹೃದಯ ಭಾಗದಲ್ಲಿ ತೆಗೆದಿರುವ ಗುಂಡಿಗಳನ್ನು ಮುಚ್ಚದೆ ಹಾಗೆಯೇ ಬಿಡಲಾಗಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರು ಪ್ರತಿನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ. ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಒಂದು ಟ್ರಾನ್ಸ್‌ಫಾರ್ಮರ್‌ನಿಂದ ಮತ್ತೊಂದಕ್ಕೆ ಕೇಬಲ್ ಅಳವಡಿಸಲು ನಾಲ್ಕೈದು ಅಡಿ ಆಳದ ಗುಂಡಿಗಳನ್ನು ತೋಡಲಾಗಿದೆ. ಕೆಲಸ ಮುಗಿದರೂ ಗುಂಡಿಗಳನ್ನು ಮುಚ್ಚದೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಎರಡು ಮೂರು ವಾರಗಳಿಂದ ಈ ಗುಂಡಿಗಳು ತೆರೆದ ಸ್ಥಿತಿಯಲ್ಲೇ ಇವೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನಾಗಲಿ ಅಥವಾ ಬ್ಯಾರಿಕೇಡ್‌ಗಳನ್ನಾಗಲಿ ಹಾಕದೆ ನಿರ್ಲಕ್ಷ್ಯ ತೋರಲಾಗಿದೆ. ರಾತ್ರಿ ವೇಳೆ ಹಾಗೂ ಜನನಿಬಿಡ ಸಮಯದಲ್ಲಿ ಗುಂಡಿಗಳು ಕಾಣದೆ ಅನೇಕ ಮಹಿಳೆಯರು ಮತ್ತು ಮಕ್ಕಳು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಸ್ಥಳೀಯರು ಹತ್ತಾರು ಬಾರಿ ದೂರು ನೀಡಿದರೂ ಬೆಸ್ಕಾಂ ಸಿಬ್ಬಂದಿ ಮಾತ್ರ ಎಚ್ಚೆತ್ತುಕೊಂಡಿಲ್ಲ. ಯಾವುದಾದರೂ ದೊಡ್ಡ ಅನಾಹುತ ಸಂಭವಿಸುವವರೆಗೆ ಅಧಿಕಾರಿಗಳು ಕಾಯುತ್ತಿದ್ದಾರೆಯೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಕೂಡಲೇ ಈ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪಟ್ಟಣದ ನಿವಾಸಿಗಳು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More