ಕಚೇರಿ ಬದಲು ಡಾಬಾದಲ್ಲಿ ಕೆಲಸ, ಎಣ್ಣೆ ಪಾರ್ಟಿ ಮಾಡುತ್ತಲೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್

Edited By:

Updated on: Feb 14, 2026 | 12:52 PM

ಬೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುವ ಬದಲು ಗುಡಿಬಂಡೆ ಉಪವಿಭಾಗದ ಜೂನಿಯರ್ ಇಂಜಿನಿಯರ್ ರಾಘವೇಂದ್ರ ಮತ್ತು ಸಿಬ್ಬಂದಿ ಡಾಬಾವೊಂದರಲ್ಲಿ ಕುಳಿತುಕೊಂಡು ಮದ್ಯ ಸೇವನೆ ಮಾಡುತ್ತಾ ಕಡತಗಳನ್ನು ವಿಲೇವಾರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅಧಿಕಾರಿಗಳ ಈ ಆಟಾಟೋಪಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರ, ಫೆಬ್ರವರಿ 14: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬೆಸ್ಕಾಂ ಉಪ ವಿಭಾಗದಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ರಾಘವೇಂದ್ರ ಮತ್ತು ಸಿಬ್ಬಂದಿ ಬೇಜಾವಾಬ್ದಾರಿಯಿಂದ ವರ್ತಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಚೇರಿ ಬದಲು ಡಾಬದಲ್ಲಿ ಕುಳಿತುಕೊಂಡು ಮದ್ಯ ಸೇವನೆ ಮಾಡುತ್ತಾ, ಮದ್ಯದ ಬಾಟಲಿಗಳ ನಡುವೆ ಕುಳಿತುಕೊಂಡು ಕಡತ ವಿಲೇವಾರಿ ಮಾಡುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 14, 2026 12:51 PM
Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More