ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

|

Updated on: Jul 26, 2024 | 11:07 PM

ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ಪತ್ತೆಗೆ ಬೆಂಗಳೂರು ಪೊಲೀಸರು ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿದ್ದಾರೆ. ನಿಯಮ ಉಲ್ಲಂಘಿಸುವ ಸವಾರರ ಪತ್ತೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಈ ಹೊಸ ತಂತ್ರಜ್ಞಾನದ ಬಗ್ಗೆ ಪರಮೇಶ್ವರ್​ ಮಾಹಿತಿ ಪಡೆದುಕೊಂಡಿದ್ದಾರೆ.

ಬೆಂಗಳೂರು, ಜುಲೈ 26: ನಗರದ ಸಂಚಾರ ಕೇಂದ್ರ ಕಚೇರಿಯಲ್ಲಿ ಇಂದು ಪೊಲೀಸ್ ಅಧಿಕಾರಿಗಳ ಜತೆ ಗೃಹಸಚಿವ ಡಾ.ಪರಮೇಶ್ವರ್ (Dr. G Parameshwara) ಸಭೆ ಮಾಡಿದ್ದು, ಸಂಚಾರ ದಟ್ಟಣೆ ಮತ್ತು ನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ, ಸಂಚಾರ ವಿಭಾಗ ಜಂಟಿ ಆಯುಕ್ತ ಅನುಚೇತ್ ಸೇರಿ ಹಲವರು ಭಾಗಿಯಾಗಿದ್ದರು. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ಪತ್ತೆಗೆ ಬೆಂಗಳೂರು ಪೊಲೀಸರು ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿದ್ದಾರೆ. ನಿಯಮ ಉಲ್ಲಂಘಿಸುವ ಸವಾರರ ಪತ್ತೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಈ ಹೊಸ ತಂತ್ರಜ್ಞಾನದ ಬಗ್ಗೆ ಪರಮೇಶ್ವರ್​ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಡಾ.ಜಿ.ಪರಮೇಶ್ವರ್, ಟ್ರಾಫಿಕ್‌ಜಾಮ್‌ಗೆ ಬೆಂಗಳೂರು ನಗರ ಕುಖ್ಯಾತಿ ಪಡೆದುಕೊಂಡಿತ್ತು. ನಮ್ಮವರು ಸಾಕಷ್ಟು ಉತ್ತಮ ಪಡಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ವರದಿ: ಪ್ರದೀಪ್​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on