AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಗುಡ್ ನ್ಯೂಸ್: ಭದ್ರಾ ಡ್ಯಾಂನಿಂದ 10 ದಿನಗಳ ಕಾಲ 1500 ಕ್ಯೂಸೆಕ್ ನೀರು ಬಿಡುಗಡೆ

ರೈತರಿಗೆ ಗುಡ್ ನ್ಯೂಸ್: ಭದ್ರಾ ಡ್ಯಾಂನಿಂದ 10 ದಿನಗಳ ಕಾಲ 1500 ಕ್ಯೂಸೆಕ್ ನೀರು ಬಿಡುಗಡೆ

ಬಸವರಾಜ್​ ಯರಗಣವಿ
| Edited By: |

Updated on: Nov 16, 2026 | 9:20 AM

Share

ಶಿವಮೊಗ್ಗದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಿಹಿ ಸುದ್ದಿ. ಭದ್ರಾ ಡ್ಯಾಂನಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಇಂದಿನಿಂದ 10 ದಿನಗಳ ಕಾಲ 1500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಒಣಗುತ್ತಿರುವ ತೆಂಗು ಮತ್ತು ಅಡಿಕೆ ತೋಟಗಳ ರಕ್ಷಣೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶಿವಮೊಗ್ಗ, ನವೆಂಬರ್ 16: ಶಿವಮೊಗ್ಗ ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಬಹು ನಿರೀಕ್ಷಿತ ಸಿಹಿ ಸುದ್ದಿ ಸಿಕ್ಕಿದೆ. ಭದ್ರಾ ಡ್ಯಾಂನ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಇಂದಿನಿಂದ (ನವೆಂಬರ್ 16) ನೀರು ಬಿಡುಗಡೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದ ಶಿವಮೊಗ್ಗ ಜಿಲ್ಲೆಯ ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದರಂತೆ, ಭದ್ರಾ ಡ್ಯಾಂನಿಂದ ಒಟ್ಟು 1500 ಕ್ಯೂಸೆಕ್ ನೀರನ್ನು ಮುಂದಿನ 10 ದಿನಗಳ ಕಾಲ ಹರಿಸಲಾಗುತ್ತದೆ. ಪ್ರಮುಖವಾಗಿ, ಒಣಗುತ್ತಿರುವ ತೆಂಗು ಮತ್ತು ಅಡಿಕೆ ತೋಟಗಳ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ರೈತ ಸಂಘದ ಅಧ್ಯಕ್ಷ ಹೆಚ್. ಆರ್. ಬಸವರಾಜಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಭದ್ರಾ ಡ್ಯಾಂನಿಂದ ನೀರು ಹರಿಸಲು ಮುಂದಾಗಿರುವ ನಿರ್ಧಾರಕ್ಕೆ ಮುಖ್ಯಮಂತ್ರಿ, ನೀರಾವರಿ ಸಚಿವರು ಹಾಗೂ ಶಾಸಕ ಸಂಗಮೇಶ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಈ ನೀರಿನ ಬಿಡುಗಡೆಯು ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದ್ದು, ರೈತರ ಬೆಳೆಗಳಿಗೆ ಜೀವ ತುಂಬಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More