ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು: ವಾಹನ ಸಂಚಾರ ಅಸ್ತವ್ಯಸ್ತ
ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕುಡಿನೀರುಕಟ್ಟೆ ಗ್ರಾಮದ ಬಳಿ ಮಹತ್ವದ ಭದ್ರಾ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್‌ನಿಂದ ನೀರು ಚಿಮ್ಮುತ್ತಿದ್ದ ಪರಿಣಾಮವಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ರಸ್ತೆಯ ಮೇಲೆ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸಿದರು. ಬಳಿಕ ತಾತ್ಕಾಲಿಕವಾಗಿ ನೀರು ಸರಬರಾಜು ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ನಡೆಸಲಾಗಿದೆ.
ಚಿತ್ರದುರ್ಗ, ಅಕ್ಟೋಬರ್ 05: ಕುಡಿನೀರುಕಟ್ಟೆ ಬಳಿ ಭದ್ರಾ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕುಡಿನೀರುಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೆರೆಗಳಿಗೆ ಪ್ರಾಯೋಗಿಕ ನೀರು ಹರಿಸುವ ಪೈಪ್‌ಲೈನ್ ಡ್ಯಾಮೇಜ್ ಆದ ಪರಿಣಾಮ ನೀರು ಚಿಮ್ಮಿದ್ದು, ಕೆಲ ಹೊತ್ತು ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಬಳಿಕ ತಾತ್ಕಾಲಿಕವಾಗಿ ನೀರು ಸರಬರಾಜು ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ನಡೆಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
