ಭದ್ರಾ ಮೇಲ್ದಂಡೆ ಯೋಜನೆ ನೀರು ಬಿಡುಗಡೆ; ಜನರು ಫುಲ್ ಖುಷ್!

Edited By:

Updated on: Sep 06, 2026 | 11:34 AM

ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ಬಳಿ ಇರುವ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸಲಾಯಿತು. ಸಚಿವ ಟಿ. ರಘುಮೂರ್ತಿ ಅವರು ಪೂಜೆ ಸಲ್ಲಿಸಿ ಯೋಜನೆಗೆ ಚಾಲನೆ ನೀಡಿದರು. ಈ ಮೂಲಕ ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳ ಕೆರೆಗಳಿಗೆ ನೀರು ಒದಗಿಸುವ ಮಹತ್ವದ ಹೆಜ್ಜೆಯಾಗಿದೆ.

ಚಿಕ್ಕಮಗಳೂರು, ಸೆಪ್ಟೆಂಬರ್ 06: ಜಿಲ್ಲೆಯ ಜನರ ಬಹುಕಾಲದ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ ಸಚಿವ ಟಿ. ರಘುಮೂರ್ತಿ ಅವರು ಚಾಲನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಲಕ್ಕವಳ್ಳಿ ಬಳಿಯ ಭದ್ರಾ ಜಲಾಶಯದ ಇನ್ ಟೇಕ್ ಪಾಯಿಂಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ, ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಮೂಲಕ ಈ ಮಹತ್ವದ ಯೋಜನೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಭಾಗಗಳ ಜನರಲ್ಲಿ ಜಲ ಸಂಭ್ರಮ ಮನೆ ಮಾಡಿತ್ತು. ಯೋಜನೆಗೆ ಚಾಲನೆ ನೀಡುವ ಸಮಯದಲ್ಲಿ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ತರೀಕೆರೆ ಶಾಸಕ ಶ್ರೀನಿವಾಸ್, ಶಿರಾ ಶಾಸಕ ಟಿ.ಬಿ. ಜಯಚಂದ್ರ ಸೇರಿ ಹಲವು ಗಣ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಭದ್ರಾ ಮೇಲ್ದಂಡೆ ಯೋಜನೆಯು ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ಈ ಯೋಜನೆಯ ಮೂಲಕ ಈ ಪ್ರದೇಶದ ಕೆರೆಗಳಿಗೆ ನೀರು ತುಂಬಿಸಲಾಗುವುದು, ಇದು ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ. ಈ ನೀರಿನ ಬಿಡುಗಡೆಯು ಕೃಷಿಕರಿಗೆ ಮತ್ತು ಈ ಭಾಗದ ಜನರಿಗೆ ದೊಡ್ಡ ಆಶಯವನ್ನು ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us