ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು: ವಿಡಿಯೋ ಬಗ್ಗೆ ಸತ್ಯಾಸತ್ಯತೆ ಬಿಚ್ಚಿಟ್ಟ ಶಾಸಕ
ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕೆಂದು ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಗಮೇಶ್ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಸ್ವತಃ ಸಂಗಮೇಶ್ ಪ್ರತಿಕ್ರಿಯಿಸಿದ್ದು, ಭಾಷಣದ ಸಂಪೂರ್ಣ ದೃಶ್ಯ ತೋರಿಸಿಲ್ಲ. ನನ್ನ ಹೇಳಿಕೆ ತಿರುಚಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಶಿವಮೊಗ್ಗ, (ಸೆಪ್ಟೆಂಬರ್ 10): ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕೆಂದು ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಗಮೇಶ್ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಸ್ವತಃ ಸಂಗಮೇಶ್ ಪ್ರತಿಕ್ರಿಯಿಸಿದ್ದು, ಭಾಷಣದ ಸಂಪೂರ್ಣ ದೃಶ್ಯ ತೋರಿಸಿಲ್ಲ. ನನ್ನ ಹೇಳಿಕೆ ತಿರುಚಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಭದ್ರಾವತಿಯಲ್ಲಿ ಅಶಾಂತಿಗೆ ಬಿಜೆಪಿ, ಜೆಡಿಎಸ್ ಹುನ್ನಾರ ನಡೆಸಿದೆ. ಕಾಂಗ್ರೆಸ್‌ನವರು ನಿಜವಾದ ಹಿಂದೂಗಳು. ಬಿಜೆಪಿಯದ್ದು ಬೂಟಾಟಿಕೆ ಹಿಂದುತ್ವ. ದೇಶ ವಿರೋಧಿ ಘೋಷಣೆ ಕೂಗಿದವರಿಗೆ ಬೂಟ್‌ನಿಂದ ಒದ್ದು ಒಳಗೆಹಾಕಬೇಕು. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದಿದ್ದಾರೆ.

