ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು: ವಿಡಿಯೋ ಬಗ್ಗೆ ಸತ್ಯಾಸತ್ಯತೆ ಬಿಚ್ಚಿಟ್ಟ ಶಾಸಕ

Updated on: Sep 10, 2025 | 8:06 PM

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕೆಂದು ಭದ್ರಾವತಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಗಮೇಶ್‌ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಸ್ವತಃ ಸಂಗಮೇಶ್‌ ಪ್ರತಿಕ್ರಿಯಿಸಿದ್ದು, ಭಾಷಣದ ಸಂಪೂರ್ಣ ದೃಶ್ಯ ತೋರಿಸಿಲ್ಲ. ನನ್ನ ಹೇಳಿಕೆ ತಿರುಚಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಶಿವಮೊಗ್ಗ, (ಸೆಪ್ಟೆಂಬರ್ 10): ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕೆಂದು ಭದ್ರಾವತಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಗಮೇಶ್‌ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಸ್ವತಃ ಸಂಗಮೇಶ್‌ ಪ್ರತಿಕ್ರಿಯಿಸಿದ್ದು, ಭಾಷಣದ ಸಂಪೂರ್ಣ ದೃಶ್ಯ ತೋರಿಸಿಲ್ಲ. ನನ್ನ ಹೇಳಿಕೆ ತಿರುಚಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಭದ್ರಾವತಿಯಲ್ಲಿ ಅಶಾಂತಿಗೆ ಬಿಜೆಪಿ, ಜೆಡಿಎಸ್‌ ಹುನ್ನಾರ ನಡೆಸಿದೆ. ಕಾಂಗ್ರೆಸ್‌ನವರು ನಿಜವಾದ ಹಿಂದೂಗಳು. ಬಿಜೆಪಿಯದ್ದು ಬೂಟಾಟಿಕೆ ಹಿಂದುತ್ವ. ದೇಶ ವಿರೋಧಿ ಘೋಷಣೆ ಕೂಗಿದವರಿಗೆ ಬೂಟ್‌ನಿಂದ ಒದ್ದು ಒಳಗೆಹಾಕಬೇಕು. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More