ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆಯ ಮತ್ತೊಂದು ವಿಡಿಯೋ ವೈರಲ್

Edited By:

Updated on: Sep 09, 2025 | 4:25 PM

ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಭದ್ರಾವತಿಯ ಗಾಂಧಿ ವೃತ್ತದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಮೊದಲ ವಿಡಿಯೋ ವೈರಲ್ ಆಗಿದ್ದು ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ. ದೇಶದ್ರೋಹಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಗಳು ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಸಹ ತನಿಖೆ ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಪಾಕ್ ಪರ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.

ಶಿವಮೊಗ್ಗ, (ಸೆಪ್ಟೆಂಬರ್ 9): ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಭದ್ರಾವತಿಯ ಗಾಂಧಿ ವೃತ್ತದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಮೊದಲ ವಿಡಿಯೋ ವೈರಲ್ ಆಗಿದ್ದು ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ. ದೇಶದ್ರೋಹಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಗಳು ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಸಹ ತನಿಖೆ ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಪಾಕ್ ಪರ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಹೌದು.. ಭದ್ರಾವತಿಯ ಸೀಗೆಬಾಗಿಯ ವೃತ್ತದಲ್ಲಿ ಯುವಕರ ಗುಂಪು ಪಾಕಿಸ್ತಾನ ಜಿಂದಾಬಾದ್ ಎಂದು ದೇಶದ್ರೋಹಿ ಘೋಷಣೆ ಕೂಗಿದ್ದಾರೆ. ಹೀಗೆ ಭದ್ರಾವತಿ ನಗರದಲ್ಲಿ ಒಂದು ಬಾರಿ ಗಾಂಧಿ ವೃತ್ತದಲ್ಲಿ ಮತ್ತೊಂದು ಬಾರಿ ಸೀಗೆಬಾಗಿಯ ವೃತ್ತದ ಬಳಿ ಪಾಕ್ ಪರ ಘೋಷಣೆ ಮೊಳಗಿದ್ದು, ಇದಕ್ಕೆ ಪೊಲೀಸರು ಮಟ್ಟ ಹಾಕಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ