ಶಿವಮೊಗ್ಗ: ಮಹಿಳೆಯ ಕಾಲಿನ ಮೇಲೆ ಹತ್ತಿದ ಸಾರಿಗೆ ಬಸ್;ಸಿಸಿಟಿವಿಯಲ್ಲಿ ಸೆರೆ ಆಯ್ತು ಡೆಡ್ಲಿ ಆಕ್ಸಿಡೆಂಟ್ ದೃಶ್ಯ

Edited By: ಕಿರಣ್ ಹನುಮಂತ್​ ಮಾದಾರ್

Updated on: Mar 03, 2024 | 5:02 PM

ದ್ರಾವತಿ(Bhadravati) ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಬಳಿ ಸಾರಿಗೆ ಬಸ್​ ಮಹಿಳೆಯ ಕಾಲಿನ ಮೇಲೆ ಹತ್ತಿದ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ಮಹಿಳೆಯ ಕಾಲಿನ ಮೇಲೆ ಸಾರಿಗೆ ಬಸ್ ಹತ್ತಿದ್ದು, ಅಪಘಾತದಲ್ಲಿ ಭದ್ರಾವತಿ ಪಟ್ಟಣದ ನಿವಾಸಿಯಾಗಿರುವ ಚಂದ್ರಬಾಯಿ ಎನ್ನುವವರಿಗೆ ಗಂಭೀರ ಗಾಯವಾಗಿದೆ.

ಶಿವಮೊಗ್ಗ, ಮಾ.03: ಸಾರಿಗೆ ಬಸ್​ ಮಹಿಳೆಯ ಕಾಲಿನ ಮೇಲೆ ಹತ್ತಿದ ಘಟನೆ ಭದ್ರಾವತಿ(Bhadravati) ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಭೀಕರ ಅಪಘಾತದ(Accident) ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ನೋಡ ನೋಡುತ್ತಿದ್ದಂತೆ ಮಹಿಳೆಯ ಕಾಲಿನ ಮೇಲೆ ಸಾರಿಗೆ ಬಸ್ ಹತ್ತಿದ್ದು, ಅಪಘಾತದಲ್ಲಿ ಭದ್ರಾವತಿ ಪಟ್ಟಣದ ನಿವಾಸಿಯಾಗಿರುವ ಚಂದ್ರಬಾಯಿ ಎನ್ನುವವರಿಗೆ ಗಂಭೀರ ಗಾಯವಾಗಿದೆ. ಬಸ್ ನಿಲ್ದಾಣಕ್ಕೆ ಆಗಮಿಸುವ ವೇಳೆ ಈ ಅವಘಡ ಸಂಭವಿಸಿದ್ದು, ಭದ್ರಾವತಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More