ಕರ್ನಾಟಕ ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ

Edited By:

Updated on: May 24, 2026 | 10:56 PM

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬಿಜೆಪಿ ಮುಖಂಡ ಮತ್ತು ವಕೀಲ ಭರತ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಪತಿಯ ಸ್ನೇಹಿತನೆಂದು ಪರಿಚಯಿಸಿಕೊಂಡು ಮಹಿಳೆ ಮೇಲೆ ದೌರ್ಜನ್ಯ ಎಸಗಲಾಗಿದೆ ಎನ್ನಲಾಗುತ್ತಿದೆ. ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭರತ್ ಪರಾರಿಯಾಗಿದ್ದಾನೆ. ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ಘಟನೆ ಭದ್ರಾವತಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಶಿವಮೊಗ್ಗ, ಮೇ 24: ಬಿಜೆಪಿ ಮುಖಂಡ, ವಕೀಲ ಭರತ್ ವಿರುದ್ಧ ಅತ್ಯಾಚಾರ ಹಾಗೂ ಬೆದರಿಕೆ ಆರೋಪ ಕೇಳಿಬಂದಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಪೇಪರ್​ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿಯ ಸ್ನೇಹಿತನೆಂದು ಪರಿಚಯಿಸಿಕೊಂಡು ಮಹಿಳೆ ಮೇಲೆ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ. ಇತ್ತ ಕೇಸ್ ದಾಖಲಾಗುತ್ತಿದ್ದಂತೆ ಬಿಜೆಪಿ ಮುಖಂಡ ಭರತ್ ಪರಾರಿಯಾಗಿದ್ದಾರೆ. ಸದ್ಯ ಪೇಪರ್​ಟೌನ್ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 24, 2026 10:56 PM
Follow Us
Basavaraj Yaraganavi