ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಬಸ್‌ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಭದ್ರಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶಿವಮೊಗ್ಗ, ಮಾರ್ಚ್ 30: ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳದಲ್ಲಿ ನಡೆದಿದೆ. ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಗಾಯಾಳುಗಳಿಗೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಬಸ್ ಹೊರಟ್ಟಿತ್ತು. ಮಾರ್ಗ ಮಧ್ಯೆ ಅವಘಡ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 30, 2026 04:48 PM
Loading...
Unable to load recommendations.
Follow Us