ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿಯೇ ಹುಟ್ಟಬೇಕು ಎಂದ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್

Updated By: Ganapathi Sharma

Updated on: Sep 10, 2025 | 10:11 AM

ಶಿವಮೊಗ್ಗದ ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಯನ್ನು ಕಿಡಿಗೇಡಿಗಳು ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಈದ್ ಮಿಲಾದ್ ಮೆರವಣಿಗೆಗೂ ಮುನ್ನ ಸ್ಥಳೀಯ ಶಾಸಕ ಬಿಕೆ ಸಂಗಮೇಶ್ ಕೂಡ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ಬಿಜೆಪಿಗೆ ಪ್ರಮುಖ ಅಸ್ತ್ರವಾಗಿದೆ. ಬಿಕೆ ಸಂಗಮೇಶ್ ಹೇಳಿಕೆಯ ವಿಡಿಯೋ ಇಲ್ಲಿದೆ.

ಶಿವಮೊಗ್ಗ, ಸೆಪ್ಟೆಂಬರ್ 10: ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟಬೇಕೆಂಬ ಆಸೆ ಇದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದ ಸಂಗಮೇಶ್ವರ್, ‘ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ ಅಂದರೆ ಅದಕ್ಕೆ ಕಾರಣ ಮುಸ್ಲಿಂ ಬಾಂಧವರು. ಮುಂದಿನ ದಿನಗಳಲ್ಲಿ ಪುತ್ರ ಗಣೇಶನ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ಮನವಿ ಮಾಡಿಕೊಂಡರು. ಇದಾದ ನಂತರ ಈದ್ ಮೆರವಣಿಗೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪ ಕೇಳಿಬಂದಿದೆ. ಹೀಗಾಗಿ ಪ್ರತಿಪಕ್ಷ ಬಿಜೆಪಿ ನಾಯಲರು ಸಂಗಮೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 10, 2025 10:07 AM