AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO

ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO

ಸುರೇಶ್ ನಾಯಕ್
| Edited By: |

Updated on:Jul 06, 2026 | 5:46 PM

Share

ಮುಖ್ಯಾಂಶಗಳು

  • ಬೀದರ್‌ನ ಭೀಮನಗರದ NGO ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ
  • ಗುಂಪಾಗಿ SIR ಮಾಡುತ್ತಿದ್ದ ಸ್ಥಳಕ್ಕೆ ಭಗವಂತ್​​ ಖೂಬಾ ದಿಢೀರ್​​ ಭೇಟಿ
  • ಮಾಜಿ ಸಂಸದರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸ್ಥಳದಿಂದ ಕಾಲ್ಕಿತ್ತ BLO

Voter list revision: ಬೀದರ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಸಂಸದ ಭಗವಂತ ಖೂಬಾ ಭೇಟಿ ನೀಡಿ, ಮತಗಟ್ಟೆ ಅಧಿಕಾರಿಗಳ (ಬಿಎಲ್‌ಒ) ಕಾರ್ಯವೈಖರಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಯಮಾನುಸಾರ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಮತದಾರರ ಪಟ್ಟಿಗೆ ಹೊಸ ಹೆಸರು ಸೇರಿಸುವ ಮತ್ತು ಪರಿಷ್ಕರಿಸುವ ಕೆಲಸ ಮಾಡಬೇಕಿತ್ತು. ಆದರೆ, ಸ್ಥಳದಲ್ಲಿ ಬಿಎಲ್‌ಒಗಳು ಜನರನ್ನು ಒಂದೆಡೆ ಸೇರಿಸಿ ಕೆಲಸ ಮಾಡುತ್ತಿರುವುದನ್ನು ಖೂಬಾ ಪ್ರಶ್ನಿಸಿದ್ದಾರೆ.

ಬೀದರ್​​, ಜುಲೈ 06: ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕರ್ನಾಟಕದಲ್ಲಿ ನಡೆಯುತ್ತಿಲ್ಲ ಎಂಬ ವಿಪಕ್ಷಗಳ ಆರೋಪದ ನಡುವೆ ಬೀದರ್‌ನ ಭೀಮನಗರದ 109ರ ಬೂತ್​​​ನ NGO ಕಚೇರಿಯಲ್ಲಿ SIR ಮಾಡ್ತಿರುವ ಘಟನೆ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ಮಾಜಿ ಸಂಸದ ಭಗವಂತ ಖೂಬಾ ಬೆಟರ್ ಮೆಂಟ್ ಫೌಂಡೇಷನ್ ಕಚೇರಿಗೆ ಭೇಟಿ ನೀಡಿದ್ದು, NGO ಕಚೇರಿಯಲ್ಲಿ SIR ಯಾಕೆ ಎಂದು ಪ್ರಶ್ನಿಸಿದ್ದಾರೆ. ಮಾಜಿ ಸಂಸದರ ಪ್ರಶ್ನೆಗಳ ಸುರಿಮಳೆಗೆ ಉತ್ತರಿಸಲಾಗದೆ BLO ಅನಿಲ್​​ ಕುಮಾರ್‌ ಸ್ಕೂಟಿ ಹತ್ತಿ ತೆರಳಿರುವ ಪ್ರಸಂಗವೂ ಇದೇ ವೇಳೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 06, 2026 05:42 PM

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More