‘ಭಾಗ್ಯಲಕ್ಷ್ಮೀ ಧಾರಾವಾಹಿಯ ಅತ್ತೆ ಪಾತ್ರ ನೋಡಿ ಜನರು ಬದಲಾದರೆ ನನಗೆ ಅಷ್ಟೇ ಸಾಕು’; ಪದ್ಮಜಾ ರಾವ್

Updated on: Apr 17, 2023 | 9:04 AM

‘ಭಾಗ್ಯಲಕ್ಷ್ಮೀ ಧಾರಾವಾಹಿಯ ಅತ್ತೆ ಪಾತ್ರ ನೋಡಿ ಒಂದಷ್ಟು ಜನರು ಬದಲಾದರೆ ನನಗೆ ಅಷ್ಟೇ ಸಾಕು’ ಎಂದು ಪದ್ಮಜಾ ರಾವ್ ಹೇಳಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಸಾಕಷ್ಟು ಗಮನ ಸೆಳೆಯುತ್ತಿದೆ. ಅನೇಕರು ಈ ಧಾರಾವಾಹಿ ನೋಡಿ ಇಷ್ಟಪಟ್ಟಿದ್ದಾರೆ. ‘ಭಾಗ್ಯಲಕ್ಷ್ಮೀ’ಗೆ ಒಳ್ಳೆಯ ಟಿಆರ್​ಪಿ ಇದೆ. ಈ ಧಾರಾವಾಹಿಯಲ್ಲಿ ಪದ್ಮಜಾ ರಾವ್ ಅವರು ಕುಸುಮಾ ಹೆಸರಿನ ಪಾತ್ರ ಮಾಡಿದ್ದಾರೆ. ಟಿವಿ9 ಕನ್ನಡದ ಜೊತೆ ಮಾತನಾಡಿರುವ ಪದ್ಮಜಾ ರಾವ್ ತಮ್ಮ ಅನುಭವವನ್ನ ಬಿಚ್ಚಿಟ್ಟಿದ್ದಾರೆ.  ‘ಭಾಗ್ಯಲಕ್ಷ್ಮೀ (Bhagyalaxmi Serial) ಧಾರಾವಾಹಿಯ ಅತ್ತೆ ಪಾತ್ರ ನೋಡಿ ಒಂದಷ್ಟು ಜನರು ಬದಲಾದರೆ ನನಗೆ ಅಷ್ಟೇ ಸಾಕು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Apr 17, 2023 08:56 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More