ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ

Updated on: Nov 01, 2024 | 8:00 PM

ನಟ ಶಿವರಾಜ್​ಕುಮಾರ್​ ಅವರು ‘ಭೈರತಿ ರಣಗಲ್’ ಸಿನಿಮಾದಲ್ಲಿ ಅಭಿನಯಿಸಿದ್ದು, ನವೆಂಬರ್​ 15ರಂದು ಈ ಚಿತ್ರ ಬಿಡುಗಡೆ ಆಗಲಿದೆ. ನರ್ತನ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಿಲೀಸ್​ ದಿನಾಂಕ ಹತ್ತಿರ ಆಗಿರುವ ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್​ ಅವರ ನಿವಾಸದಲ್ಲೇ ಸುದ್ದಿಗೋಷ್ಠಿ ಮಾಡಲಾಗುತ್ತಿದೆ. ಅದರ ಲೈವ್​ ವಿಡಿಯೋ ಇಲ್ಲಿದೆ ನೋಡಿ..

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್​ ಅವರ ಮನೆಯಲ್ಲಿ ‘ಭೈರತಿ ರಣಗಲ್’ ಸಿನಿಮಾದ ಸುದ್ದಿಗೋಷ್ಠಿ ನಡೆಯುತ್ತಿದೆ. ಚಿತ್ರತಂಡದ ಹಲವರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಸಿನಿಮಾದ ಬಗ್ಗೆ ಎಲ್ಲರೂ ಮಾಹಿತಿ ನೀಡುತ್ತಿದ್ದಾರೆ. ನ.15ರಂದು ತೆರೆಕಾಣಲಿರುವ ಈ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ರುಕ್ಮಿಣಿ ವಸಂತ್, ಬಾಬು ಹಿರಣ್ಣಯ್ಯ, ಮಧು ಗುರುಸ್ವಾಮಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More