Bharachukki Falls: ಕೆಆರ್​ಎಸ್​ ಡ್ಯಾಂನಿಂದ ನೀರು ಬಿಡುಗಡೆ; ಭೋರ್ಗರೆಯುತ್ತಾ ಪ್ರವಾಸಿಗರನ್ನು ಸೆಳೆಯುತ್ತಿದೆ ಭರಚುಕ್ಕಿ ಜಲಪಾತ

ಭೋರ್ಗರೆಯುತ್ತಿರುವ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳನ್ನು ನೋಡಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ.

Bharachukki Falls: ಕೆಆರ್​ಎಸ್​ ಡ್ಯಾಂನಿಂದ ನೀರು ಬಿಡುಗಡೆ; ಭೋರ್ಗರೆಯುತ್ತಾ ಪ್ರವಾಸಿಗರನ್ನು ಸೆಳೆಯುತ್ತಿದೆ ಭರಚುಕ್ಕಿ ಜಲಪಾತ
| Updated By: ಸುಷ್ಮಾ ಚಕ್ರೆ

Updated on: Jul 11, 2022 | 2:39 PM

ಕೆಆರ್​​ಎಸ್​ ಡ್ಯಾಂನಿಂದ 72,964 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಹೀಗಾಗಿ, ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಭರಚುಕ್ಕಿ ಜಲಪಾತ (Bharachukki Falls) ಭೋರ್ಗರೆಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಕಬಿನಿ (Kabini Dam) ಮತ್ತು ಕೆಆರ್​​ಎಸ್​ ಅಣೆಕಟ್ಟೆಯಿಂದ (KRS Dam) ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್ ಮತ್ತು ಕಬಿನಿ ಡ್ಯಾಂನಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಗಗನಚುಕ್ಕಿ ಜಲಪಾತವೂ (Gaganachukki Falls) ಸಹ ಮೈದುಂಬಿಕೊಂಡು ಧುಮ್ಮಿಕ್ಕುತ್ತಿದೆ. ಭೋರ್ಗರೆಯುತ್ತಿರುವ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳನ್ನು ನೋಡಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ.

Follow us