‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ಗೆ ಫಿನಾಲೆ ದಿನ ಸಮೀಪಿಸಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಜೀ ಕನ್ನಡ ವಾಹಿನಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ ಅನ್ನೋದು ವಿಶೇಷ. ಭಾನುವಾರ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಇದಕ್ಕಾಗಿ ಫ್ಯಾನ್ಸ್ ಕೂಡ ಕಾದಿದ್ದಾರೆ.
ಇಷ್ಟು ವರ್ಷಗಳ ಕಾಲ ಭರ್ಜರಿ ಮನರಂಜನೆ ನೀಡಿದ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ಗೆ ಫಿನಾಲೆ ಸಮೀಪಿಸಿದೆ. ಭಾನುವಾರ ಸಂಜೆ ಆರು ಗಂಟೆಗೆ ಫಿನಾಲೆ ಆರಂಭ ಆಗಲಿದೆ. ಡ್ರೋನ್ ಪ್ರತಾಪ್, ರಕ್ಷಕ್ ಬುಲೆಟ್ ಸೇರಿದಂತೆ 10 ಜೋಡಿಗಳು ಫಿನಾಲೆಯಲ್ಲಿ ಇವೆ. ಇವರ ಪೈಕಿ ಒಬ್ಬರು ಈ ಸೀಸನ್ ವಿನ್ನರ್ ಆಗಲಿದ್ದಾರೆ. ಅವರು ಯಾರು ಎಂಬುದು ಸದ್ಯದ ಪ್ರಶ್ನೆ. ಇದಕ್ಕೆ ಭಾನುವಾರ ಉತ್ತರ ಸಿಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

