‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಹೊಸ ಎಪಿಸೋಡ್ ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಬಾರಿ ಔಟ್ಡೋರ್ ಶೂಟ್ ಮಾಡಲು ನಿರ್ಧರಿಸಲಾಗಿದೆ. ಹೊಸ ಎಪಿಸೋಡ್ ಶೂಟ್ ಯಲ್ಲಾಪುರದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ. ಎಲ್ಲಾ ಸ್ಪರ್ಧಿಗಳು ಖುಷಿಯಿಂದ ಹೋಗಿದ್ದಾರೆ.
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ (Bharjari Bachelors 2) ಎಪಿಸೋಡ್ ಈಗಾಗಲೇ ಪ್ರಸಾರ ಕಾಣುತ್ತಿದೆ. ಇಷ್ಟು ದಿನ ಒಳಾಂಗಣ ಶೂಟಿಂಗ್ ನಡೆಯುತ್ತಿತ್ತು. ಈಗ ಹೊರ ವಲಯದಲ್ಲಿ ಶೂಟ್ ಮಾಡಲು ಸಿದ್ಧತೆ ನಡೆದಿದೆ. ಈಗಾಗಲೇ ಶೂಟ್ ಪೂರ್ಣಗೊಂಡಿದ್ದು, ವೀಕೆಂಡ್ನಲ್ಲಿ ಪ್ರಸಾರ ಕಾಣಲಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಸಮೀಪದ ಹಳ್ಳಿಯಲ್ಲಿ ಈ ಶೂಟಿಂಗ್ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಪ್ಲೇಸ್ನ ಹುಡುಕಿದ್ದು ರವಿಚಂದ್ರನ್ ಎನ್ನುವ ವಿಚಾರವೂ ರಿವೀಲ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

