‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?

Updated on: May 08, 2025 | 11:34 AM

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಹೊಸ ಎಪಿಸೋಡ್ ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಬಾರಿ ಔಟ್​​ಡೋರ್ ಶೂಟ್ ಮಾಡಲು ನಿರ್ಧರಿಸಲಾಗಿದೆ. ಹೊಸ ಎಪಿಸೋಡ್ ಶೂಟ್ ಯಲ್ಲಾಪುರದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ. ಎಲ್ಲಾ ಸ್ಪರ್ಧಿಗಳು ಖುಷಿಯಿಂದ ಹೋಗಿದ್ದಾರೆ.

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ (Bharjari Bachelors 2) ಎಪಿಸೋಡ್ ಈಗಾಗಲೇ ಪ್ರಸಾರ ಕಾಣುತ್ತಿದೆ. ಇಷ್ಟು ದಿನ ಒಳಾಂಗಣ ಶೂಟಿಂಗ್ ನಡೆಯುತ್ತಿತ್ತು. ಈಗ ಹೊರ ವಲಯದಲ್ಲಿ ಶೂಟ್ ಮಾಡಲು ಸಿದ್ಧತೆ ನಡೆದಿದೆ. ಈಗಾಗಲೇ ಶೂಟ್ ಪೂರ್ಣಗೊಂಡಿದ್ದು, ವೀಕೆಂಡ್​ನಲ್ಲಿ ಪ್ರಸಾರ ಕಾಣಲಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಸಮೀಪದ ಹಳ್ಳಿಯಲ್ಲಿ ಈ ಶೂಟಿಂಗ್ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಪ್ಲೇಸ್​ನ ಹುಡುಕಿದ್ದು ರವಿಚಂದ್ರನ್ ಎನ್ನುವ ವಿಚಾರವೂ ರಿವೀಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More