ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ ಎಂ. ದೀಪನ್

Edited By:

Updated on: May 25, 2026 | 11:54 AM

ಭಟ್ಕಳದಲ್ಲಿ ಮೂರಿನ್ ಕಟ್ಟೆ ಮರುನಿರ್ಮಾಣದ ವಿವಾದ ಭುಗಿಲೆದ್ದಿದೆ. ಈ ಸಂಬಂಧ 6 ಜನರನ್ನು ಬಂಧಿಸಿ, 4 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ. ದೀಪನ್ ತಿಳಿಸಿದ್ದಾರೆ. ಮೂಲ ಕಟ್ಟೆಗೆ ಯಾವುದೇ ಧಕ್ಕೆಯಾಗಿಲ್ಲ, ತಪ್ಪು ಮಾಹಿತಿ ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದವರು ಹೇಳಿದ್ದಾರೆ.

ಕಾರವಾರ, ಮೇ 25: ಭಟ್ಕಳದಲ್ಲಿನ ಮೂರಿನ್ ಕಟ್ಟೆ ಮರುನಿರ್ಮಾಣದ ಕುರಿತ ವಿವಾದದಲ್ಲಿ ಆರು ಜನರನ್ನು ಬಂಧಿಸಿ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕಾರವಾರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎಂ. ದೀಪನ್ ಮಾಹಿತಿ ನೀಡಿದ್ದಾರೆ. ಹೆದ್ದಾರಿ ವಿಸ್ತರಣೆ ಕಾರಣದಿಂದ ಮೂಲ ಮೂರಿನ್ ಕಟ್ಟೆಯನ್ನು ಸ್ಥಳಾಂತರಿಸಬೇಕಾಗಿತ್ತು, ರಸ್ತೆಯ ಪಕ್ಕದಲ್ಲಿ ಮರುನಿರ್ಮಾಣಕ್ಕೆ ಜಾಗ ನೀಡಲಾಗಿತ್ತು. ಆದರೆ, ಈ ನಿರ್ಮಾಣದ ವಿಡಿಯೋ ವೈರಲ್ ಆಗಿ ತಪ್ಪು ಮಾಹಿತಿ ಹರಡಿದ ಪರಿಣಾಮ ಯುವಕರು ಜಮಾಯಿಸಿ ಗೊಂದಲ ಸೃಷ್ಟಿಸಿದ್ದಾರೆ. ಮೂಲ ಮೂರಿನ್ ಕಟ್ಟೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗಿಲ್ಲ, ಅದು ತನ್ನ ಸ್ಥಳದಲ್ಲಿಯೇ ಸುರಕ್ಷಿತವಾಗಿದೆ ಎಂದು ದೀಪನ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರ ಮೇಲೆ ಹಲ್ಲೆ ಹಾಗೂ ಹೆದ್ದಾರಿ ತಡೆಗಟ್ಟಿದ ಸಂಬಂಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸುಳ್ಳು ಸುದ್ದಿಗಳನ್ನು ಹರಡದಂತೆ ಸಾರ್ವಜನಿಕರಿಗೆ ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More