Assembly polls: ಹಾಸನ ಕ್ಷೇತ್ರದ ಟಿಕೆಟ್ ತನಗೆ ಮಾತ್ರ ಅನ್ನೋದು ಭವಾನಿ ರೇವಣ್ಣಗೆ  ಖಾತರಿಯಾದಂತಿದೆ!  

ಅರುಣ್​ ಕುಮಾರ್​ ಬೆಳ್ಳಿ

Updated on: Feb 25, 2023 | 4:35 PM

ಭವಾನಿಯವರು ನಾನೇ ಅಭ್ಯರ್ಥಿ ಎಂಬ ಗತ್ತು ಮತ್ತು ಆತ್ಮವಿಶ್ವಾಸದಲ್ಲಿ ಮತದಾರರನ್ನು ಭೇಟಿಯಾಗುತ್ತಿದ್ದಾರೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ!  

ಹಾಸನ: ಹೆಚ್ ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ (Bhavani Revanna) ಹಾಸನ ಮತಕ್ಷೇತ್ರದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದರೆ ಅವರಿಗೆ ಈಗಾಗಲೇ ಟಿಕೆಟ್ ಸಿಕ್ಕುಬಿಟ್ಟಿದೆ ಅಂತ ಗುಮಾನಿ ಹುಟ್ಟುತ್ತದೆ. ಅವರು ತಮ್ಮ ಪತಿ ಹೆಚ್ ಡಿ ರೇವಣ್ಣರೊಂದಿಗೆ (HD Revanna) ಎರಡು ದಿನಗಳಿಂದ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಟಿಕೆಟ್ ಅವರಿಗೆ ನೀಡುವುದು ಅಂತ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಈಗಾಗಲೇ ನಿರ್ಧರಿಸಿ ಮಾಧ್ಯಮಗಳ ಮುಂದೆ ಮಾತಾಡುವಾಗ ಮಾತ್ರ ಹಾಸನ ಸೇರಿದಂತೆ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಆಗ ಬಿಡುಗಡೆಯಾಗಲಿದೆ ಈಗ ಬಿಡುಗಡೆಯಾಗಲಿದೆ ಅಂತ ಕಾಗೆ ಹಾರಿಸುತ್ತಿದ್ದಾರೆಯೇ? ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ, ಭವಾನಿಯವರು ನಾನೇ ಅಭ್ಯರ್ಥಿ ಎಂಬ ಗತ್ತು ಮತ್ತು ಆತ್ಮವಿಶ್ವಾಸದಲ್ಲಿ ಮತದಾರರನ್ನು ಭೇಟಿಯಾಗುತ್ತಿದ್ದಾರೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.