ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಭವ್ಯಾ ಗೌಡ ಅವರು ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಆಗಿ ಗಮನ ಸೆಳೆದವರು. ಅವರು ಈಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧಿಯಾಗಿದ್ದಾರೆ. ಮದನ ಮನಮೋಹಿನಿ ಹಾಡಿಗೆ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿಯವರು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಭವ್ಯಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿಯಾಗಿದ್ದರು. ಆ ಬಳಿಕ ಅವರು ‘ಕರ್ಣ’ ಧಾರಾವಾಹಿಯಲ್ಲಿ ನಟಿಸಲು ಆರಂಭಿಸಿದರು. ಈ ಬೆನ್ನಲ್ಲೇ ಅವರಿಗೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಸ್ಪರ್ಧಿಸೋ ಅವಕಾಶ ಸಿಕ್ಕಿದೆ. ‘ಕಾಂತಾರ: ಚಾಪ್ಟರ್ 1’ ಚಿತ್ರದ ‘ಮದನ ಮನ ಮೋಹಿನಿ’ ಹಾಡಿಗೆ ಭವ್ಯಾ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ಶೋನ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಇದೇ ವೇಳೆ ನಂದ ಕೂಡ ಅವರಿಗೆ ಸ್ಪರ್ಧಿಯಾಗಿ ಹೆಜ್ಜೆ ಹಾಕಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
