ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್

Edited By:

Updated on: Jan 05, 2026 | 8:53 AM

ಭವ್ಯಾ ಗೌಡ ಅವರು ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಆಗಿ ಗಮನ ಸೆಳೆದವರು. ಅವರು ಈಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧಿಯಾಗಿದ್ದಾರೆ. ಮದನ ಮನಮೋಹಿನಿ ಹಾಡಿಗೆ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿಯವರು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಭವ್ಯಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿಯಾಗಿದ್ದರು. ಆ ಬಳಿಕ ಅವರು ‘ಕರ್ಣ’ ಧಾರಾವಾಹಿಯಲ್ಲಿ ನಟಿಸಲು ಆರಂಭಿಸಿದರು. ಈ ಬೆನ್ನಲ್ಲೇ ಅವರಿಗೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಸ್ಪರ್ಧಿಸೋ ಅವಕಾಶ ಸಿಕ್ಕಿದೆ. ‘ಕಾಂತಾರ: ಚಾಪ್ಟರ್ 1’ ಚಿತ್ರದ ‘ಮದನ ಮನ ಮೋಹಿನಿ’ ಹಾಡಿಗೆ ಭವ್ಯಾ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ಶೋನ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಇದೇ ವೇಳೆ ನಂದ ಕೂಡ ಅವರಿಗೆ ಸ್ಪರ್ಧಿಯಾಗಿ ಹೆಜ್ಜೆ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More