‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ ಗೌಡ

Edited By:

Updated on: Jan 31, 2025 | 4:55 PM

ತ್ರಿವಿಕ್ರಮ್ ಮತ್ತು ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ತುಂಬ ಆಪ್ತವಾಗಿದ್ದರು. ಹಾಗಾಗಿ ಅವರ ನಡುವೆ ಪ್ರೀತಿ ಮೂಡಿರಬಹುದು ಎಂಬ ಅನುಮಾನ ಕೆಲವರಿಗೆ ಇದೆ. ಈ ಬಗ್ಗೆ ಭವ್ಯಾ ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ನಡುವೆ ತ್ರಿವಿಕ್ರಮ್ ಮತ್ತು ಮೋಕ್ಷಿತಾ ಪೈ ಬಗ್ಗೆಯೂ ಭವ್ಯಾ ಗೌಡ ಅವರು ಮಾತನಾಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಮುಗಿದ ಬಳಿಕ ಭವ್ಯಾ ಗೌಡ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ತ್ರಿವಿಕ್ರಮ್ ಮತ್ತು ತಮ್ಮ ನಡುವಿನ ಬಾಂಧವ್ಯದ ಬಗ್ಗೆ ಅವರು ಮಾತಾಡಿದ್ದಾರೆ. ‘ನನ್ನ ಮತ್ತು ತ್ರಿವಿಕ್ರಮ್ ನಡುವೆ ಅಂಥದ್ದು ಏನೂ ಇಲ್ಲ. ನಮ್ಮದು ಬರೀ ಸ್ನೇಹ. ಅದನ್ನು ಎಷ್ಟು ರೀತಿಯಲ್ಲಿ ಹೇಳಿದರೂ ಜನರು ಬೇರೆ ಬೇರೆ ರೀತಿ ಸ್ವೀಕರಿಸಿದ್ದಾರೆ. ಈ ಬಗ್ಗೆ ನಾನು ಎರಡು, ಮೂರು ಕಡೆ ಹೇಳಬಹುದು. ಹೋದಕಡೆಯಲ್ಲ ಇದನ್ನೇ ಹೇಳುತ್ತಿದ್ದರೆ ಅದು ನನಗೂ ಸರಿ ಕಾಣಿಸಲ್ಲ, ನೋಡುವವರಿಗೂ ಸರಿ ಕಾಣಿಸಲ್ಲ’ ಎಂದು ಭವ್ಯಾ ಗೌಡ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More