Bheema River Flood: ಉಕ್ಕಿ ಹರಿಯುತ್ತಿದೆ ಭೀಮಾ ನದಿ; ಗ್ರಾಮಗಳಿಗೆ ಪ್ರವಾಹದ ಆತಂಕ!

Updated on: Sep 24, 2025 | 10:14 AM

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದ್ದು, ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಭೀಮಾ ತೀರದಲ್ಲಿರುವ ಯಲ್ಲಮ್ಮ ದೇವಿಯ ದೇವಸ್ಥಾನ ಮುಳುಗಡೆಯಾಗಿದೆ. ಅಷ್ಟೇ ಅಲ್ಲದೇ ಭೀಮಾ ತೀರದಲ್ಲಿರುವ ಗ್ರಾಮಗಳಿಗೆ ಪ್ರವಾಹದ ಆತಂಕ ಎದುರಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಧಾರ್ಮಿಕ ಕ್ಷೇತ್ರ ಗಾಣಗಾಪುರದ ಸೇತುವೆಯೂ ಮುಳುಗಡೆಯಾಗಿದೆ.

ಕಲಬುರಗಿ, ಸೆಪ್ಟೆಂಬರ್ 24: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಭೀಮಾ ತೀರದಲ್ಲಿರುವ ಯಲ್ಲಮ್ಮ ದೇವಸ್ಥಾನ ‌ಮುಳುಗಡೆಯಾಗಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಧಾರ್ಮಿಕ ಕ್ಷೇತ್ರ ಗಾಣಗಾಪುರ ಸೇತವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ಸುಮಾರು ನಾಲ್ಕೈದು ಅಡಿ ನೀರು ಬಂದಿದ್ದು, ಇದರಿಂದಾಗಿ ಜೇವರ್ಗಿ-ಅಫಜಲಪುರ ಸಂರ್ಪಕ ಕಡಿತಗೊಂಡಿದೆ. ನದಿ ತೀರದಲ್ಲಿರುವ ಗ್ರಾಮಗಳಿಗೆ ಪ್ರವಾಹದ ಆತಂಕ ಶುರುವಾಗಿದೆ. ವಿಡಿಯೋ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ