ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

Edited By:

Updated on: Aug 06, 2026 | 6:35 PM

ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆಯಿಂದಾಗಿ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾದಗಿರಿ ಜಿಲ್ಲೆಯ ಗುರುಸಣಗಿ ಬ್ಯಾರೇಜ್​ನಿಂದ 1.2 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ದೇವಸ್ಥಾನಗಳು ಜಲಾವೃತವಾಗಿವೆ. ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮತ್ತು ಜಾನುವಾರು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಯಾದಗಿರಿ, ಆಗಸ್ಟ್​ 06: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಜನಿ ಹಾಗೂ ವೀರ ಜಲಾಶಯಗಳಿಂದ ನೀರು ಬಿಡುಗಡೆ ಮಾಡಲಾಗಿದ್ದು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಬಳಿಯ ಭೀಮಾ ನದಿಯು ಮೈದುಂಬಿ ಭೋರ್ಗರೆಯುತ್ತಿದೆ. ಗುರುಸುಣಗಿ ಬ್ಯಾರೇಜ್‌ನ 24 ಕ್ರಸ್ಟ್ ಗೇಟ್‌ಗಳ ಪೈಕಿ 23 ಗೇಟ್‌ಗಳನ್ನು ತೆರೆದು ನದಿಗೆ ಸುಮಾರು 1.20 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದ್ದು, ನದಿ ತೀರದಲ್ಲಿರುವ ಕಂಗಳೇಶ್ವರ ಹಾಗೂ ವೀರಾಂಜನ ದೇವಸ್ಥಾನಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಮುಂಬರುವ ದಿನಗಳಲ್ಲಿ ನದಿಗೆ ನೀರು ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರೈತರ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದ್ದು, ನದಿ ತೀರಕ್ಕೆ ಸಾರ್ವಜನಿಕರು ಹಾಗೂ ಜಾನುವಾರುಗಳು ತೆರಳದಂತೆ ಮತ್ತು ನೀರೆತ್ತುವ ಪಂಪ್‌ಸೆಟ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us