ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ಅನುಗುಣವಾಗಿ ಭೂಪಾಲ್‌ನ ಫೈಜಲ್ ನಿಸಾರ್ ಎಂಬ ವ್ಯಕ್ತಿ 21 ಬಾರಿ 'ಭಾರತ್ ಮಾತಾ ಕಿ ಜೈ' ಎಂದು ಘೋಷಣೆ ಕೂಗಿದ್ದಾರೆ. ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪ ಹೊತ್ತಿದ್ದ ಆ ವ್ಯಕ್ತಿಗೆ 21 ಸಲ ಭಾರತ್ ಮಾತಾ ಕಿ ಜೈ ಎಂದು ಹೇಳಿಸುವ ಶಿಕ್ಷೆ ನೀಡಲಾಗಿದೆ.
ಜಬಲ್‌ಪುರ: ಜಬಲ್‌ಪುರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಪಾಕ್ ಪರ ಘೋಷಣೆಗಳನ್ನು ಕೂಗಿದ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬರು ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ್ದರು. ಅದಕ್ಕೆ ಕೋರ್ಟ್ ವಿಭಿನ್ನವಾದ ಶಿಕ್ಷೆ ವಿಧಿಸಿದೆ. ಫೈಝಲ್ ನಿಸಾರ್ ಅಲಿಯಾಸ್ ಫೈಜಾನ್ ಎಂಬ ವ್ಯಕ್ತಿ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿ ಜಬಲ್‌ಪುರ ಪೊಲೀಸ್ ಠಾಣೆಯ ಹೊರಗೆ ರಾಷ್ಟ್ರೀಯ ಧ್ವಜದ ಮುಂದೆ 21 ಬಾರಿ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ