IPL 2026: ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಭುವಿ; ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗಿ
RCB vs CSK Record Alert: ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 200 ವಿಕೆಟ್‌ಗಳ ಗಡಿ ದಾಟಿದ ವಿಶ್ವದ ಮೊದಲ ವೇಗದ ಬೌಲರ್ ಎನಿಸಿಕೊಂಡರು. ಭುವಿ, ಐಪಿಎಲ್‌ನಲ್ಲಿ 200 ವಿಕೆಟ್ ಪಡೆದ ಎರಡನೇ ಬೌಲರ್ ಆಗಿದ್ದು, ಯಜ್ವೇಂದ್ರ ಚಾಹಲ್ ನಂತರ ಈ ಸಾಧನೆ ಮಾಡಿದವರು. ಆಯುಷ್ ಮ್ಹಾತ್ರೆ ವಿಕೆಟ್ ಪಡೆಯುವ ಮೂಲಕ ಅವರು ಈ ಮೈಲಿಗಲ್ಲನ್ನು ತಲುಪಿದರು.
ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿಯ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ಇತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ. ಐಪಿಎಲ್‌ನಲ್ಲಿ 200 ವಿಕೆಟ್‌ಗಳ ಗಡಿ ದಾಟಿರುವ ಭುವನೇಶ್ವರ್ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಭುವನೇಶ್ವರ್ ಕುಮಾರ್ ಅವರಿಗೂ ಮೊದಲು, ಐಪಿಎಲ್ ಇತಿಹಾಸದಲ್ಲಿ ಯಾವುದೇ ವೇಗದ ಬೌಲರ್ 200 ವಿಕೆಟ್‌ಗಳನ್ನು ಪಡೆದಿರಲಿಲ್ಲ. ಇದೀಗ ಆ ದಾಖಲೆ ಭುವಿ ಪಾಲಾಗಿದೆ. ಇದರ ಜೊತೆಗೆ ಐಪಿಎಲ್‌ನಲ್ಲಿ ವಿಕೆಟ್‌ಗಳ ದ್ವಿಶತಕ ಪೂರೈಸಿದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೂ ಭುವಿ ಪಾತ್ರರಾಗಿದ್ದಾರೆ.
ಭುವನೇಶ್ವರ್ ಕುಮಾರ್ ಈ ಪಂದ್ಯದಲ್ಲಿ ತಮ್ಮ ಮೊದಲ ಓವರ್‌ನಲ್ಲಿಯೇ ಆಯುಷ್ ಮ್ಹಾತ್ರೆ ಅವರ ವಿಕೆಟ್ ಉರುಳಿಸುವ ಮೂಲಕ ಐಪಿಎಲ್‌ನಲ್ಲಿ 200 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಈ ಮೂಲಕ ಐಪಿಎಲ್‌ನಲ್ಲಿ 200 ಕ್ಕೂ ಅಧಿಕ ವಿಕೆಟ್ ಉರುಳಿಸಿದ ಬೌಲರ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ 224 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಭುವಿ ಈಗ 200 ವಿಕೆಟ್‌ಗಳೊಂದಿಗೆ ಈ ಕ್ಲಬ್‌ಗೆ ಸೇರಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

