ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಆಕ್ರೋಶಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ, ಜೂನ್ 20ಕ್ಕೆ ಬೃಹತ್ ಪ್ರತಿಭಟನೆ

Edited By:

Updated on: Jun 13, 2026 | 9:42 AM

ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಗೆ 516 ಎಕರೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಅಸಾಧ್ಯ ಎಂದು ವಿಪಕ್ಷಗಳು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ದನಿಗೂಡಿಸಿದ್ದಾರೆ. ಜೂನ್ 20ರಂದು ಏಳೆಂಟು ಜಿಲ್ಲೆಗಳ ರೈತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದಕ್ಕೆ ಜೆಡಿಎಸ್ ಮತ್ತು ಬಿಜೆಪಿ ಬೆಂಬಲ ಘೋಷಿಸಿವೆ.

ರಾಮನಗರ, ಜೂನ್ 13: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ವಿಪಕ್ಷಗಳ ನಡುವೆ ಜಟಾಪಟಿ ಆರಂಭವಾಗಿದೆ. ರೈತರ ತೀವ್ರ ವಿರೋಧದ ನಡುವೆಯೂ, ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ 516 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಗೆ ಸುಮಾರು 18,133 ಕೋಟಿ ರೂ. ವೆಚ್ಚವಾಗುವ ಅಂದಾಜಿದೆ. ಭೂಮಾಲೀಕರಿಗೆ ನಗದು ಪರಿಹಾರ ಅಥವಾ ಅಭಿವೃದ್ಧಿಪಡಿಸಿದ ನಿವೇಶನ ನೀಡುವ ಯೋಜನೆಯಿದೆ. ಆದರೆ, ಈ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ತಮ್ಮ ಸಮ್ಮತಿ ನೀಡಿಲ್ಲ. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿರುವ ವಿರೋಧ ಪಕ್ಷಗಳು, ಇದು ರೈತ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿವೆ. ರೈತರ ಹೋರಾಟಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ದನಿಗೂಡಿಸಿದ್ದು, ಸರ್ಕಾರದ ಕ್ರಮವನ್ನು ದಬ್ಬಾಳಿಕೆ ಎಂದು ಕರೆದಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಕೂಡ ರೈತರ ಹೋರಾಟಕ್ಕೆ ಬೆಂಬಲ ಘೋಷಿಸಿವೆ.

ಸರ್ಕಾರ ಭೂಸ್ವಾಧೀನ ನಿರ್ಧಾರದ ವಿರುದ್ಧ ಜೂನ್ 20ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಹೋರಾಟದಲ್ಲಿ ಏಳರಿಂದ ಎಂಟು ಜಿಲ್ಲೆಗಳ ರೈತರು ಭಾಗವಹಿಸುವ ನಿರೀಕ್ಷೆಯಿದೆ. ಬಿಡದಿ ಟೌನ್‌ಶಿಪ್ ಅನ್ನು ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಎಂದು ಸಹ ಉಲ್ಲೇಖಿಸಲಾಗುತ್ತಿದ್ದು, ಇದು ಈಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us