ವಿವಾದದ ನಡುವೆಯೇ ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ

Edited By:

Updated on: Jul 17, 2026 | 6:34 PM

ಬಿಡದಿ ಟೌನ್‌ಶಿಪ್ ಯೋಜನೆ ಪರವಾಗಿರುವ ರೈತರು ರಾಮನಗರದ ಕಂದಾಯ ಭವನದಲ್ಲಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಕಚೇರಿಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಬನ್ನಿಗಿರಿ, ಹೊಸೂರು, ಅರಳಾಳುಸಂದ್ರ, ಕೆ.ಜಿ. ಗೊಲ್ಲರಪಾಳ್ಯ ಸೇರಿದಂತೆ ಹಲವು ಗ್ರಾಮಗಳ ರೈತರು ತಮ್ಮ ಜಮೀನುಗಳ ದಾಖಲೆಗಳನ್ನು ಒದಗಿಸುತ್ತಿದ್ದು, ಪ್ರತಿ ಎಕರೆಗೆ 2 ರಿಂದ 2.17 ಕೋಟಿ ರೂ. ಪರಿಹಾರ ಪಡೆಯಲು ಮುಂದಾಗಿದ್ದಾರೆ.

ರಾಮನಗರ, ಜುಲೈ 17: ಬಿಡದಿ ಟೌನ್‌ಶಿಪ್​​ ವಿರೋಧಿಸಿ ರೈತರು ಮತ್ತು ವಿಪಕ್ಷಗಳ ಹೋರಾಟದ ನಡುವೆಯೇ ಯೋಜನೆಯ ಪರವಾಗಿರುವ ರೈತರು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಕಚೇರಿಯಲ್ಲಿ ಭೂ ಪರಿಹಾರಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಬನ್ನಿಗಿರಿ, ಹೊಸೂರು, ಅರಳಾಳುಸಂದ್ರ, ಕೆ.ಜಿ. ಗೊಲ್ಲರಪಾಳ್ಯ ಸೇರಿದಂತೆ ನಾಲ್ಕು ಗ್ರಾಮಗಳ ಭೂಸ್ವಾಧೀನಕ್ಕೆ ಆದೇಶಿಸಲಾಗಿದ್ದು, ಈ ರೈತರು ತಮ್ಮ ಭೂಮಿಯನ್ನು ನೀಡಲು ಸಿದ್ಧರಿದ್ದು, ಘೋಷಿತ ಪರಿಹಾರವನ್ನು ಪಡೆಯಲು ಮುಂದಾಗಿದ್ದಾರೆ. ಪ್ರಸ್ತುತ ಪ್ರತಿ ಎಕರೆಗೆ 2 ಕೋಟಿ ರೂ.ನಿಂದ 2.17 ಕೋಟಿ ರೂ.ವರೆಗೆ ಪರಿಹಾರ ನಿಗದಿಪಡಿಸಲಾಗಿದೆ. ರೈತರು ತಮ್ಮ ಜಮೀನಿನ ಮಾಲೀಕತ್ವದ ದಾಖಲೆಗಳು, ಆಧಾರ್ ಕಾರ್ಡ್, ಪಾಣಿ, ವಂಶವೃಕ್ಷ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸುತ್ತಿದ್ದಾರೆ. ಅಧಿಕಾರಿಗಳು ಕೂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More