ಬಿಡದಿ ಟೌನ್​ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿ: ರಾಜ್ಯವ್ಯಾಪಿ ಜನಾಂದೋಲನಕ್ಕೆ ಹೆಚ್​ಡಿ ಕುಮಾರಸ್ವಾಮಿ ತಂತ್ರ

Edited By:

Updated on: Jun 28, 2026 | 9:11 PM

ಮುಖ್ಯಾಂಶಗಳು

  • ಬಿಡದಿ ಟೌನ್​ಶಿಪ್ ಯೋಜನೆ ವಿರೋಧಿಸಿ ಅಪ್ಪಿಕೋ ಚಳವಳಿ
  • ಟೌನ್​ಶಿಪ್ ಹೆಸರಿನಲ್ಲಿ ಲಕ್ಷಾಂತರ ಮರಗಳ ಹನನ ಮಾಡಬೇಡಿ
  • ಮರಗಳನ್ನು ಅಪ್ಪಿಕೊಂಡು ಬಾಯಿ ಬಡಿದುಕೊಂಡು ಆಕ್ರೋಶ

ಬಿಡದಿ ಟೌನ್​ಶಿಪ್ ಯೋಜನೆ ವಿರುದ್ಧ ರಾಮನಗರದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಅಪ್ಪಿಕೋ ಚಳುವಳಿ ಮೂಲಕ ಮರಗಳನ್ನು ಉಳಿಸಲು ಆಗ್ರಹಿಸಿದ ರೈತರು, ಸರ್ಕಾರದ ಗಮನ ಸೆಳೆದರು. ಈ ಮಧ್ಯೆ, ಕುಮಾರಸ್ವಾಮಿ ಯೋಜನೆಯಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದು,ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ರಾಜಕೀಯ ಸಮರ ತಾರಕಕ್ಕೇರಿದೆ.

ರಾಮನಗರ, ಜೂನ್​​ 28: ಬಿಡದಿ ಟೌನ್​ಶಿಪ್ ಯೋಜನೆ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರಿದಿದೆ. ರೈತರು ವಿಭಿನ್ನವಾಗಿ ಅಪ್ಪಿಕೋ ಚಳುವಳಿಯ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬನ್ನಿಗಿರಿ ಗ್ರಾಮದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳನ್ನು ಅಪ್ಪಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಭೂಮಿ ಉಳಿಸುವ ಸಂದೇಶ ಸಾರಿದ್ದಾರೆ. ಇನ್ನು ಹೋರಾಟ ರಾಜಕೀಯ ತಿರುವು ಪಡೆದುಕೊಂಡಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ಡಿ.ಕೆ. ಶಿವಕುಮಾರ್​ಗೆ ಪಂಥಾಹ್ವಾನ ನೀಡಿದ್ದಾರೆ. ಬಿಡದಿ ಟೌನ್​ಶಿಪ್ ಯೋಜನೆಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅಕ್ರಮ ನಡೆದಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ. ಸ್ಥಳೀಯ ಹೋರಾಟವನ್ನು ರಾಜ್ಯಮಟ್ಟದ ರೈತ ಚಳುವಳಿಯಾಗಿ ಪರಿವರ್ತಿಸಲು ಕುಮಾರಸ್ವಾಮಿ ರಣತಂತ್ರ ಹೆಣೆಯುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಭೂ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More