ಬಿಡದಿ ಟೌನ್ ಶಿಪ್: ಹೆಚ್ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್
ಬಿಡದಿ ಟೌನ್‌ಶಿಪ್ ವಿವಾದವು ಡಿಕೆ ಶಿವಕುಮಾರ್ ಮತ್ತು ಹೆಚ್‌ಡಿ ಕುಮಾರಸ್ವಾಮಿ ನಡುವೆ ರಾಜಕೀಯ ಕದನಕ್ಕೆ ವೇದಿಕೆಯಾಗಿದೆ. ಕುಮಾರಸ್ವಾಮಿ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಆಹ್ವಾನಿಸಿದರೆ, ಡಿಕೆ ಶಿವಕುಮಾರ್ ಜೂನ್ 26ಕ್ಕೆ ವಿಧಾನಸೌಧಕ್ಕೆ ಬನ್ನಿ ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಜೂನ್ 27ರಂದು ಬಿಡದಿ ಅಥವಾ ಬೈರಮಂಗಲದಲ್ಲಿ ಚರ್ಚೆಗೆ ಆಹ್ವಾನಿಸಿದ್ದಾರೆ.
ಬೆಂಗಳೂರು, ಜೂನ್ 22: ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವು ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತೀರ್ವ ವಿರೋಧಿಸುತ್ತಿವೆ. ಅದರಲ್ಲೂ ಸಿಎಂ ಡಿಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಡುವೆ ಲೆಟರ್ ವಾರ್ ಶುರುವಾಗಿದೆ. ಹೆಚ್‌ಡಿ ಕುಮಾರಸ್ವಾಮಿ ದಾಖಲೆಗಳನ್ನು ಬಿಡುಗಡೆ ಮಾಡಿ, ಯೋಜನೆಯ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸರ್ಕಾರಕ್ಕೆ ಸವಾಲು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಜೂನ್ 26ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ತಮ್ಮ ಐವರು ಪ್ರತಿನಿಧಿಗಳೊಂದಿಗೆ ಆಗಮಿಸುವಂತೆ ಹೆಚ್‌ಡಿ ಕುಮಾರಸ್ವಾಮಿಗೆ ಪತ್ರದ ಮೂಲಕ ಆಹ್ವಾನ ನೀಡಿದ್ದರು. ಆದರೆ, ಸಿಎಂ ಆಹ್ವಾನವನ್ನು ತಿರಸ್ಕರಿಸಿದ ಕುಮಾರಸ್ವಾಮಿ, ಜೂನ್ 26ರಂದು ಪೂರ್ವನಿಗದಿತ ಕಾರ್ಯಕ್ರಮಗಳಿರುವ ಕಾರಣ ಬರಲು ಸಾಧ್ಯವಿಲ್ಲ. ಜೂನ್ 27ರಂದು ಚರ್ಚೆಗೆ ಸಿದ್ಧ ಎಂದಿದ್ದಾರೆ. ಆದರೆ ವಿಧಾನಸೌಧದ ಬದಲು ಬಿಡದಿ ಅಥವಾ ಭೈರಮಂಗಲದಲ್ಲಿ ರೈತರ ಸಮ್ಮುಖದಲ್ಲಿ ಚರ್ಚೆ ನಡೆಸುವಂತೆ ಪ್ರಸ್ತಾವನೆ ಇಟ್ಟಿದ್ದಾರೆ. ಇದಕ್ಕೆ ಸಿಎಂ ಡಿಕೆ. ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

