ಬಿಡದಿ ಟೌನ್​​​​ ಶಿಪ್: ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

Updated on: Jun 22, 2026 | 10:59 PM

ಬಿಡದಿ ಟೌನ್‌ಶಿಪ್ ವಿವಾದವು ಡಿಕೆ ಶಿವಕುಮಾರ್ ಮತ್ತು ಹೆಚ್‌ಡಿ ಕುಮಾರಸ್ವಾಮಿ ನಡುವೆ ರಾಜಕೀಯ ಕದನಕ್ಕೆ ವೇದಿಕೆಯಾಗಿದೆ. ಕುಮಾರಸ್ವಾಮಿ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಆಹ್ವಾನಿಸಿದರೆ, ಡಿಕೆ ಶಿವಕುಮಾರ್ ಜೂನ್ 26ಕ್ಕೆ ವಿಧಾನಸೌಧಕ್ಕೆ ಬನ್ನಿ ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಜೂನ್ 27ರಂದು ಬಿಡದಿ ಅಥವಾ ಬೈರಮಂಗಲದಲ್ಲಿ ಚರ್ಚೆಗೆ ಆಹ್ವಾನಿಸಿದ್ದಾರೆ.

ಬೆಂಗಳೂರು, ಜೂನ್​​ 22: ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವು ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮತ್ತು ಜೆಡಿಎಸ್​ ಪಕ್ಷಗಳು ತೀರ್ವ ವಿರೋಧಿಸುತ್ತಿವೆ. ಅದರಲ್ಲೂ ಸಿಎಂ ಡಿಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಡುವೆ ಲೆಟರ್​​​ ವಾರ್ ಶುರುವಾಗಿದೆ.​ ಹೆಚ್​​ಡಿ ಕುಮಾರಸ್ವಾಮಿ ದಾಖಲೆಗಳನ್ನು ಬಿಡುಗಡೆ ಮಾಡಿ, ಯೋಜನೆಯ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸರ್ಕಾರಕ್ಕೆ ಸವಾಲು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಜೂನ್ 26ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ತಮ್ಮ ಐವರು ಪ್ರತಿನಿಧಿಗಳೊಂದಿಗೆ ಆಗಮಿಸುವಂತೆ ಹೆಚ್​ಡಿ ಕುಮಾರಸ್ವಾಮಿಗೆ ಪತ್ರದ ಮೂಲಕ ಆಹ್ವಾನ ನೀಡಿದ್ದರು. ಆದರೆ, ಸಿಎಂ ಆಹ್ವಾನವನ್ನು ತಿರಸ್ಕರಿಸಿದ ಕುಮಾರಸ್ವಾಮಿ, ಜೂನ್ 26ರಂದು ಪೂರ್ವನಿಗದಿತ ಕಾರ್ಯಕ್ರಮಗಳಿರುವ ಕಾರಣ ಬರಲು ಸಾಧ್ಯವಿಲ್ಲ. ಜೂನ್ 27ರಂದು ಚರ್ಚೆಗೆ ಸಿದ್ಧ ಎಂದಿದ್ದಾರೆ. ಆದರೆ ವಿಧಾನಸೌಧದ ಬದಲು ಬಿಡದಿ ಅಥವಾ ಭೈರಮಂಗಲದಲ್ಲಿ ರೈತರ ಸಮ್ಮುಖದಲ್ಲಿ ಚರ್ಚೆ ನಡೆಸುವಂತೆ ಪ್ರಸ್ತಾವನೆ ಇಟ್ಟಿದ್ದಾರೆ. ಇದಕ್ಕೆ ಸಿಎಂ ಡಿಕೆ. ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More