ಬಿಡದಿ ಟೌನ್‌ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿ ಕುಮಾರಸ್ವಾಮಿ ಮನವಿ
ಬಿಡದಿ ಟೌನ್‌ಶಿಪ್ ವಿರುದ್ಧ 500 ದಿನಗಳಿಂದ ನಡೆಯುತ್ತಿರುವ ರೈತರ ಶಾಂತಿಯುತ ಹೋರಾಟದಲ್ಲಿ ಸರ್ವೆಗೆ ಬಂದ ಅಧಿಕಾರಿಗಳ ಮೇಲೆ ನಡೆದ ಘಟನೆ ಕುರಿತು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ರೈತರಿಗೆ ಶಾಂತಿಯುತ ಹೋರಾಟ ಮುಂದುವರಿಸಲು ಮನವಿ ಮಾಡಿದ ಅವರು, ಪೊಲೀಸ್ ಇಲಾಖೆ ಸರ್ಕಾರದ ಒತ್ತಡಕ್ಕೆ ಮಣಿದು ರೈತ ವಿರೋಧಿ ಕ್ರಮ ಕೈಗೊಂಡರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು, ಜುಲೈ 13: ‘‘ಕಳೆದ 500 ದಿನಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರೈತರನ್ನು ಕೆರಳಿಸುವ ಕೆಲಸವನ್ನು ಸರ್ಕಾರ ಮಾಡಿದೆ. ರೈತ ಮಹಿಳೆಯರ ಆಕ್ರೋಶಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ’’ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು ವಿಚಾರವಾಗಿ ಮಾಧ್ಯಮ ಹೇಳಿಕೆ ನೀಡಿರುವ ಹೆಚ್ಡಿ ಕುಮಾರಸ್ವಾಮಿ, ‘‘ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ. ನಿಮ್ಮ ಪರವಾಗಿ ಕಾನೂನಾತ್ಮಕ ಹೋರಾಟ ನಡೆಸುವುದಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಯಾವುದೇ ಕಾರಣಕ್ಕೂ ನೀವು ಹೆದರುವ ಅಗತ್ಯ ಇಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಬ್ಬಾಳಿಕೆ ನಡೆಸಿದರೆ ಸುಮ್ಮನಿರುವುದಿಲ್ಲ’’ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
