ಬೀದರ್​ನಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

Edited By:

Updated on: Oct 02, 2026 | 12:03 PM

ಬೀದರ್‌ನ ಶ್ಯಾಮರಾಜಪುರ ಬಡಾವಣೆಯ ಫರೀನಾ ಬೇಗಂ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಿಜೇರಿಯನ್ ಮೂಲಕ ಒಂದೇ ಹೆರಿಗೆಯಲ್ಲಿ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಲಾ ಒಂದೂವರೆ ಕೆಜಿ ತೂಕವಿದ್ದ ಎರಡು ಹೆಣ್ಣು ಹಾಗೂ ಒಂದು ಗಂಡು ಮಗುವಿಗೆ ಬ್ರಿಮ್ಸ್ ವೈದ್ಯರು ನೀಡಿದ ಅತ್ಯುತ್ತಮ ಆರೈಕೆಯ ನಂತರ ತಾಯಿ ಮತ್ತು ಶಿಶುಗಳು ಸಂಪೂರ್ಣ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಬೀದರ್, ಅಕ್ಟೋಬರ್ 02: ನಗರದ ಶ್ಯಾಮರಾಜಪುರ ಬಡಾವಣೆಯ ನಿವಾಸಿ ಫರೀನಾ ಬೇಗಂ ಎಂಬುವರು ಬ್ರಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಹೆರಿಗೆಯಲ್ಲಿ ಮೂವರು ಮಕ್ಕಳಿಗೆ (ಎರಡು ಹೆಣ್ಣು, ಒಂದು ಗಂಡು) ಜನ್ಮ ನೀಡಿದ್ದಾರೆ. ಈ ಹಿಂದೆ ಮೊದಲ ಹೆರಿಗೆಯಲ್ಲಿ ನಾರ್ಮಲ್ ಹೆರಿಗೆಯಾಗಿ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಫರೀನಾ ಬೇಗಂ, ಇದೀಗ ಎರಡನೇ ಹೆರಿಗೆಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಮೂವರು ಹಸುಗೂಸುಗಳಿಗೆ ತಾಯಿಯಾಗಿದ್ದಾರೆ. ಸೆಪ್ಟೆಂಬರ್ 12 ರಂದು ಜನಿಸಿದ ಈ ಮಕ್ಕಳು ತಲಾ ಒಂದೂವರೆ ಕೆಜಿಯಷ್ಟು ತೂಕವಿದ್ದು, ವೈದ್ಯರ ಅತ್ಯುತ್ತಮ ಆರೈಕೆಯ ನಂತರ ತಾಯಿ ಮತ್ತು ಮೂವರೂ ನವಜಾತ ಶಿಶುಗಳು ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಇದೀಗ ತಾಯಿ-ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More