ಶಿಷ್ಟಾಚಾರ ಉಲ್ಲಂಘನೆ ಆರೋಪ: ಬೀದರ್ ಡಿಹೆಚ್​ಒ, ಟಿಹೆಚ್​​ಒ ಅಮಾನತು ಮಾಡಿ ಆರೋಗ್ಯ ಇಲಾಖೆ ಆಯುಕ್ತರಿಂದ ಆದೇಶ

Edited By:

Updated on: Sep 18, 2026 | 10:31 AM

ಶಿಷ್ಟಾಚಾರ ಉಲ್ಲಂಘನೆ ಆರೋಪದ ಮೇಲೆ ಬೀದರ್ ಡಿಹೆಚ್ಓ ಡಾ. ಧ್ಯಾನೇಶ್ವರ ನಿರಗುಡಿ ಹಾಗೂ ಬಸವಕಲ್ಯಾಣ ಟಿಹೆಚ್ಓ ಡಾ. ಅಶೋಕ್ ಮೈಲಾರಿ ಅವರನ್ನು ಅಮಾನತು ಮಾಡಲಾಗಿದೆ. ಉಪವಿಭಾಗ ಆಸ್ಪತ್ರೆ ಕಟ್ಟಡ ಕಾಮಗಾರಿ ಬ್ಯಾನರ್‌ನಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಭಾವಚಿತ್ರ ಹಾಕದೇ ಇದ್ದದ್ದು ಹಾಗೂ ಸೌಲಭ್ಯ ಒದಗಿಸುವಲ್ಲಿ ವಿಫಲರಾದದ್ದು ಅಮಾನತಿಗೆ ಕಾರಣವಾಗಿದೆ. ಆರೋಗ್ಯ ಇಲಾಖೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ಬೀದರ್, ಸೆಪ್ಟೆಂಬರ್​​ 18: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಧ್ಯಾನೇಶ್ವರ ನಿರಗುಡಿ ಮತ್ತು ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಮೈಲಾರಿ ಅವರನ್ನು ತತ್ಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಶಿಷ್ಟಾಚಾರ ಉಲ್ಲಂಘನೆ ಮತ್ತು ಕರ್ತವ್ಯ ಲೋಪದ ಆರೋಪ ಹಿನ್ನೆಲೆ ಆರೋಗ್ಯ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಉಪವಿಭಾಗ ಆಸ್ಪತ್ರೆ ಕಟ್ಟಡ ಕಾಮಗಾರಿಯ ಸಂದರ್ಭದಲ್ಲಿ ನಡೆದ ಘಟನೆಯೇ ಅಮಾನತಿಗೆ ಮುಖ್ಯ ಕಾರಣವಾಗಿದೆ. ಕಾಮಗಾರಿ ಸ್ಥಳದಲ್ಲಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ರಾಜ್ಯದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಭಾವಚಿತ್ರವನ್ನು ಹಾಕದೇ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿಯೂ ಈ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದೂರಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 18, 2026 10:06 AM
Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More