ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ

Edited By:

Updated on: Sep 09, 2026 | 7:41 PM

ಬೀದರ್‌ನ ಅಷ್ಟೂರು ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಶತಮಾನಗಳಿಂದಲೂ ಸೌಹಾರ್ದತೆಯ ಪ್ರತೀಕವಾಗಿದೆ. ಇಲ್ಲಿನ ದರ್ಗಾದಲ್ಲಿ ಮುಸ್ಲಿಮರು ಅಹ್ಮದ್ ಶಾ ಅಲಿ ವಲಿಯವರನ್ನು ಪೂಜಿಸಿದರೆ, ಹಿಂದೂಗಳು ಅಲ್ಲಮಪ್ರಭು ದೇವರನ್ನು ಆರಾಧಿಸುತ್ತಾರೆ. ಒಂದೇ ಸ್ಥಳದಲ್ಲಿ ಎರಡು ಧರ್ಮಗಳ ಈ ವಿಶಿಷ್ಟ ಪೂಜಾ ಪದ್ಧತಿಯು ಸಾಮರಸ್ಯದ ಬದುಕಿಗೆ ನಿದರ್ಶನವಾಗಿದೆ.

ಬೀದರ್​, ಸೆಪ್ಟೆಂಬರ್​ 09: ‘ದೇವನೂಬ್ಬ ನಾಮ ಹಲವು’ ಎಂಬಂತೆ ಬೀದರ್ ನಗರಕ್ಕೆ ಸಮೀಪದ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್‌ಗಳು ಹಿಂದೂ ಹಾಗೂ ಮುಸ್ಲಿಂ ಸಹೋದರತ್ವ ಸಾರುವ ಪ್ರತೀಕವಾಗಿದೆ. ಬಹಮನಿ ಸುಲ್ತಾನರ ಕಾಲದಿಂದ ನಡೆದುಕೊಂಡು ಬಂದಿರುವ ಈ ಪರಂಪರೆಯಲ್ಲಿ, ಒಂದೇ ಗೋರಿಯನ್ನು ಮುಸ್ಲಿಮರು ‘ಅಹ್ಮದ್ ಅಲ್ ವಲಿ ಶಾ’ ಎಂದು ಪೂಜಿಸಿದರೆ, ಹಿಂದೂಗಳು ‘ಅಲ್ಲಮಪ್ರಭು ದೇವರು’ ಎಂದು ಭಕ್ತಿಯಿಂದ ಆರಾಧಿಸುತ್ತಾರೆ. ಪ್ರತಿವರ್ಷ ಹೋಳಿ ಹಬ್ಬದ ನಂತರ ಐದು ದಿನಗಳ ಕಾಲ ಇಲ್ಲಿ ಅದ್ಧೂರಿ ಜಾತ್ರೆ ನಡೆಯಲಿದ್ದು, ಕಲಬುರಗಿಯ ಮಾಣಿಹಾಳ ಹಾಗೂ ಆಳಂದದಿಂದ ಅಲ್ಲಮಪ್ರಭು ಗುರುಗಳು ಪಾದಯಾತ್ರೆ ನಡೆಸಿ ಬಂದು ಜಾತ್ರೆಗೆ ಚಾಲನೆ ನೀಡುತ್ತಾರೆ. ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಹಿಂದೂ ಮತ್ತು ಮುಸ್ಲಿಂ ಭಕ್ತರು ಒಟ್ಟಾಗಿ ಭಾಗವಹಿಸುವ ಮೂಲಕ ಈ ಗ್ರಾಮವು ಸೌಹಾರ್ದತೆಯ ಪ್ರತೀಕವಾಗಿ ಗಮನ ಸೆಳೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More