ಬೀದರ್‌ನಲ್ಲಿ ವಿದ್ಯುತ್ ನೀಡಲು ಕಣ್ಣಾಮುಚ್ಚಾಲೆ: ಜೆಸ್ಕಾಂ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ
ಬೀದರ್ ಜಿಲ್ಲೆಯ ಕಮಠಾಣ ಗ್ರಾಮದ ರೈತರು ಜೆಸ್ಕಾಂ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ 7 ಗಂಟೆ ತ್ರೀ ಫೇಸ್ ವಿದ್ಯುತ್ ಭರವಸೆ ನೀಡಿದ್ದರೂ, ಕೇವಲ 4-5 ಗಂಟೆಗಳ ಕಾಲ ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ನೀರಾವರಿಗೆ ತೀವ್ರ ತೊಂದರೆಯಾಗಿದೆ. ಬರಗಾಲದ ಪರಿಸ್ಥಿತಿಯಲ್ಲಿ ಬೆಳೆಗಳನ್ನು ರಕ್ಷಿಸಲು ನಿರಂತರ ವಿದ್ಯುತ್ ಬೇಕೆಂದು ರೈತರು ಆಗ್ರಹಿಸಿದ್ದಾರೆ.
ಬೀದರ್, ಸೆ.23: ಜಿಲ್ಲೆಯಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿಹೋದ ರೈತರು, ಇಂದು ಬೀದರ್ ತಾಲೂಕಿನ ಕಮಠಾಣ ಗ್ರಾಮದ ಜೆಸ್ಕಾಂ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಐದಾರು ಹಳ್ಳಿಯ ನೂರಾರು ರೈತರು, ರೈತ ಮಹಿಳೆಯರು ಭಾಗವಹಿಸಿ, ವಿದ್ಯುತ್ ಪೂರೈಕೆಯಲ್ಲಿನ ಅಸಮರ್ಪಕತೆಯನ್ನು ಖಂಡಿಸಿದರು. ಸರ್ಕಾರ ರೈತರ ಜಮೀನಿಗೆ 7 ಗಂಟೆಗಳ ನಿರಂತರ ತ್ರೀ ಫೇಸ್ ವಿದ್ಯುತ್ ನೀಡುವ ಭರವಸೆ ನೀಡಿತ್ತು. ಆದರೆ, ವಾಸ್ತವದಲ್ಲಿ ಕೇವಲ 4 ರಿಂದ 5 ಗಂಟೆಗಳ ಕಾಲ ಮಾತ್ರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅದೂ ಕೂಡ ಪದೇಪದೇ ಲೋಡ್ ಶೆಡ್ಡಿಂಗ್ನಿಂದಾಗಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡರು. ಈ ವರ್ಷ ಮಳೆ ಅಭಾವ ತೀವ್ರವಾಗಿರುವುದರಿಂದ, ಬಾವಿ ಮತ್ತು ಬೋರ್‌ವೆಲ್ ನೀರನ್ನೇ ಆಶ್ರಯಿಸಿರುವ ರೈತರು, ತಮ್ಮ ಒಣಗುತ್ತಿರುವ ಬೆಳೆಗಳನ್ನು ರಕ್ಷಿಸಿಕೊಳ್ಳಲು ವಿದ್ಯುತ್ ಅತ್ಯಗತ್ಯ ಎಂದು ಮನವಿ ಮಾಡಿದರು. ನಿರಂತರ 7 ಗಂಟೆ ತ್ರೀ ಫೇಸ್ ವಿದ್ಯುತ್ ಪೂರೈಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ರೈತರು ಆಗ್ರಹಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

