ಬೀದರ್‌ನಲ್ಲಿ ವಿದ್ಯುತ್ ನೀಡಲು ಕಣ್ಣಾಮುಚ್ಚಾಲೆ: ಜೆಸ್ಕಾಂ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ

Edited By:

Updated on: Sep 23, 2026 | 5:52 PM

ಬೀದರ್ ಜಿಲ್ಲೆಯ ಕಮಠಾಣ ಗ್ರಾಮದ ರೈತರು ಜೆಸ್ಕಾಂ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ 7 ಗಂಟೆ ತ್ರೀ ಫೇಸ್ ವಿದ್ಯುತ್ ಭರವಸೆ ನೀಡಿದ್ದರೂ, ಕೇವಲ 4-5 ಗಂಟೆಗಳ ಕಾಲ ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ನೀರಾವರಿಗೆ ತೀವ್ರ ತೊಂದರೆಯಾಗಿದೆ. ಬರಗಾಲದ ಪರಿಸ್ಥಿತಿಯಲ್ಲಿ ಬೆಳೆಗಳನ್ನು ರಕ್ಷಿಸಲು ನಿರಂತರ ವಿದ್ಯುತ್ ಬೇಕೆಂದು ರೈತರು ಆಗ್ರಹಿಸಿದ್ದಾರೆ.

ಬೀದರ್, ಸೆ.23:  ಜಿಲ್ಲೆಯಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿಹೋದ ರೈತರು, ಇಂದು ಬೀದರ್ ತಾಲೂಕಿನ ಕಮಠಾಣ ಗ್ರಾಮದ ಜೆಸ್ಕಾಂ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಐದಾರು ಹಳ್ಳಿಯ ನೂರಾರು ರೈತರು, ರೈತ ಮಹಿಳೆಯರು ಭಾಗವಹಿಸಿ, ವಿದ್ಯುತ್ ಪೂರೈಕೆಯಲ್ಲಿನ ಅಸಮರ್ಪಕತೆಯನ್ನು ಖಂಡಿಸಿದರು. ಸರ್ಕಾರ ರೈತರ ಜಮೀನಿಗೆ 7 ಗಂಟೆಗಳ ನಿರಂತರ ತ್ರೀ ಫೇಸ್ ವಿದ್ಯುತ್ ನೀಡುವ ಭರವಸೆ ನೀಡಿತ್ತು. ಆದರೆ, ವಾಸ್ತವದಲ್ಲಿ ಕೇವಲ 4 ರಿಂದ 5 ಗಂಟೆಗಳ ಕಾಲ ಮಾತ್ರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅದೂ ಕೂಡ ಪದೇಪದೇ ಲೋಡ್ ಶೆಡ್ಡಿಂಗ್​ನಿಂದಾಗಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡರು. ಈ ವರ್ಷ ಮಳೆ ಅಭಾವ ತೀವ್ರವಾಗಿರುವುದರಿಂದ, ಬಾವಿ ಮತ್ತು ಬೋರ್‌ವೆಲ್ ನೀರನ್ನೇ ಆಶ್ರಯಿಸಿರುವ ರೈತರು, ತಮ್ಮ ಒಣಗುತ್ತಿರುವ ಬೆಳೆಗಳನ್ನು ರಕ್ಷಿಸಿಕೊಳ್ಳಲು ವಿದ್ಯುತ್ ಅತ್ಯಗತ್ಯ ಎಂದು ಮನವಿ ಮಾಡಿದರು. ನಿರಂತರ 7 ಗಂಟೆ ತ್ರೀ ಫೇಸ್ ವಿದ್ಯುತ್ ಪೂರೈಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ರೈತರು ಆಗ್ರಹಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 23, 2026 05:40 PM
Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More