ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಇಂಜಿನಿಯರಿಂಗ್ ಸೀಟು ಕೊಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಇದರಿಂದ ವಿದ್ಯಾರ್ಥಿ ಹಾಗೂ ಕುಟುಂಬಸ್ಥರು ಫುಲ್ ಖಷ್ ಆಗಿದ್ದಾರೆ.
ಬೀದರ್, (ಏಪ್ರಿಲ್ 20): ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ (CET Exam) ಅವಕಾಶ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವಂಚಿತನಾದ ವಿದ್ಯಾರ್ಥಿಗೆ ಉಚಿತ ಇಂಜಿನಿಯರಿಂಗ್ ಸೀಟ್ (Engineering Seat) ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯವನ್ನು ಸಚಿವರು ತುಂಬಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದ್ದು, ಇದು ನೋವಿನ ಸಂಗತಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಈ ಘಟನೆ ನಡೆಯಬಾರದಾಗಿತ್ತು. ಈ ಬಗ್ಗೆ ತಮ್ಮ ಗಮನಕ್ಕೆ ಬಂದ ಕೂಡಲೇ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ. ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವೂ ಆಗಿದೆ ಎಂದರು.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
