ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್‌ಸಿ!
ಬೀದರ್ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆ ಗಲಾಟೆಗೆ ಕಾರಣವಾಯಿತು. ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಭೀಮರಾವ್ ಪಾಟೀಲ್ ಅವರು ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಭೀಮರಾವ್ ಪಾಟೀಲ್, “ಅದನ್ನು ಕೇಳಲು ನೀನ್ಯಾರು?” ಎಂದು ಪ್ರತಿಕ್ರಿಯಿಸಿ ಏಕವಚನದಲ್ಲಿ ನಿಂದಿಸಿದಾಗ ವಾಗ್ವಾದವು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುತ್ತಿದ್ದಂತೆ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಇಬ್ಬರನ್ನೂ ಬೇರ್ಪಡಿಸಿದರು. ನಂತರ ಸಚಿವ ಈಶ್ವರ ಖಂಡ್ರೆ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.
ಬೀದರ್, ಜನವರಿ 05: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆ ಎಮ್ಎಲ್ಎ ಹಾಗೂ ಎಮ್ಎಲ್ಸಿ ನಡುವಿನ ಗಲಾಟೆಗೆ ಕಾರಣವಾಯಿತು. ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಭೀಮರಾವ್ ಪಾಟೀಲ್ ಅವರು ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಭೀಮರಾವ್ ಪಾಟೀಲ್, ಏಕವಚನದಲ್ಲಿ ನಿಂದಿಸಿದ್ದರು. ಇದರಿಂದಾಗಿ ವಾಗ್ವಾದವು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ನಂತರ ಸಚಿವ ಈಶ್ವರ ಖಂಡ್ರೆ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

