ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಗುದ್ದಿದ ಕೆಎಸ್‌ಆರ್‌ಟಿಸಿ ಬಸ್‌

Updated on: Sep 21, 2025 | 2:37 PM

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಗೋಡೆಗೆ ಗುದ್ದಿದಂತಹ ಘಟನೆ ಬೀದರ್‌ ನಗರದ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಪ್ರಯಾಣಿಸುತ್ತಿದ್ದ ಈ ಸರ್ಕಾರಿ ಬಸ್‌ ಬೀದರ್‌ನಿಂದ ಉದ್ಗಿರ್‌ಗೆ ಹೋಗುತ್ತಿದ್ದ ವೇಳೆ ಗೋಡೆಗೆ ಗುದ್ದಿದ್ದು, ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೀದರ್‌, ಸೆಪ್ಟೆಂಬರ್‌ 21: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು (KSRTC Bus) ಗೋಡೆಗೆ ಗುದ್ದಿದಂತಹದ ಘಟನೆ ಬೀದರ್‌ ನಗರದ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಪ್ರಯಾಣಿಸುತ್ತಿದ್ದ ಈ ಸರ್ಕಾರಿ ಬಸ್‌ ಬೀದರ್‌ನಿಂದ ಉದ್ಗಿರ್‌ಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆ ಪಕ್ಕದಲ್ಲಿನ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Sep 21, 2025 02:36 PM