ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ ಬೀದರ್‌ನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಸ್ವಚ್ಛತಾ ಅಭಿಯಾನ

Updated on: Sep 19, 2025 | 2:10 PM

ಬೀದರ್‌ನಲ್ಲಿ ಬಿಜೆಪಿ ನಗರ ಘಟಕ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವೆ ಶೋಭಾ ಕರಂದ್ಲಾಜೆ ಪೊರಕೆ ಹಿಡಿದು ಕಸ ಗುಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆ ಬೀದರ್‌ ನಗರದ ರೇವಪ್ಪಯ್ಯ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿದ್ದು, ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದಾರೆ.

ಬೀದರ್‌, ಸೆಪ್ಟೆಂಬರ್‌ 19: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆ ಬೀದರ್‌ನ ಬಿಜೆಪಿ ನಗರ ಘಟಕ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೈ ಜೋಡಿಸಿದ್ದಾರೆ. ಬೀದರ್‌ ನಗರದ ರೇವಪ್ಪಯ್ಯ ದೇವಸ್ಥಾನದಲ್ಲಿ ಈ ಒಂದು ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ