ಬೀದರ್​ನಲ್ಲಿ ಅಕ್ರಮ ಕೆಂಪು ಮಣ್ಣು ಸಾಗಾಟ ದಂಧೆ: ಕಂಡು ಕಾಣದಂತೆ ಕುಳಿತ ಅಧಿಕಾರಿಗಳು

Edited By:

Updated on: Nov 25, 2023 | 10:37 PM

ಬೀದರ್​ ನಗರದ ಹೊರವಲಯದಲ್ಲಿರುವ ಮಲ್ಕಾಪುರ ಗ್ರಾಮದ ಬಳಿ ಪಕ್ಕದಲ್ಲಿಯೇ ಬೃಹತ್ ಗುಡ್ಡವನ್ನ ಕೊರೆದು ಅಕ್ರಮ ಕೆಂಪು ಮಣ್ಣು ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಇಲ್ಲಿ ಅಕ್ರಮ ಮಣ್ಣು ಕೊರೆಯುವ ಕೆಲಸ ನಡೆಯುತ್ತಿದ್ದರು ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ.

ಬೀದರ್​, ನವೆಂಬರ್​ 25: ನಗರದ ಹೊರವಲಯದಲ್ಲಿರುವ ಮಲ್ಕಾಪುರ ಗ್ರಾಮದ ಬಳಿ ಪಕ್ಕದಲ್ಲಿಯೇ ಬೃಹತ್ ಗುಡ್ಡವನ್ನ ಕೊರೆದು ಅಕ್ರಮ ಕೆಂಪು ಮಣ್ಣು (red soil) ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಇಲ್ಲಿ ಅಕ್ರಮ ಮಣ್ಣು ಕೊರೆಯುವ ಕೆಲಸ ನಡೆಯುತ್ತಿದ್ದರು ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ನಾಲ್ಕು ವರ್ಷದ ಹಿಂದೆ ಇದೆ ಸ್ಥಳದಲ್ಲಿಯೇ ಅಕ್ರಮವಾಗಿ ಮಣ್ಣನ್ನ ತೆಗೆದಯುತ್ತಿದ್ದರು. ಆಗ ಜಿಲ್ಲಾಧಿಕಾರಿಯಾಗಿದ್ದ ಅನಿರುದ್ಧ ಶ್ರವಣ ಇಲ್ಲಿನ ಅಕ್ರಮ ಮಣ್ಣು ತೆಗೆಯುವ ಕೆಲಸಕ್ಕೆ ಬ್ರೇಕ್ ಬಿದ್ದಿತ್ತು. ಆದರೆ ಈಗ ಮತ್ತೆ ಅಕ್ರಮ ಮಣ್ಣು ಕೊರೆಯುವ ದಂಧೆ ಹೆಚ್ಚಾಗಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೆ ಬ್ರೇಕ್ ಹಾಕಬೇಕು ನಮ್ಮ ಸುಂದರವಾದ ಪರಿಸರವನ್ನ ಕಾಪಾಡಬೇಕು ಎಂದು ಮನವಿ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 25, 2023 10:35 PM
Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More