AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್‌ನ ಕೀರ್ತಿ ವೈರ್ ಮೆಶ್ ಪ್ಲಾಸ್ಟಿಕ್ ಗೋದಾಮಿಗೆ ಬೆಂಕಿ!

ಬೀದರ್‌ನ ಕೀರ್ತಿ ವೈರ್ ಮೆಶ್ ಪ್ಲಾಸ್ಟಿಕ್ ಗೋದಾಮಿಗೆ ಬೆಂಕಿ!

ಸುರೇಶ್ ನಾಯಕ್
| Edited By: |

Updated on: Oct 04, 2026 | 10:34 AM

Share

ಬೀದರ್ ತಾಲೂಕಿನ ಬೆಳ್ಳೂರು ಗ್ರಾಮದ ಬಳಿ ಇರುವ ಕೀರ್ತಿ ವೈರ್ ಮೆಶ್ ಪ್ಲಾಸ್ಟಿಕ್ ಕಚ್ಚಾ ಸಾಮಗ್ರಿ ಗೋದಾಮಿನಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಗೋದಾಮು ಸುಟ್ಟು ಕರಕಲಾಗಿದ್ದು, ಪ್ಲಾಸ್ಟಿಕ್ ಕಚ್ಚಾವಸ್ತುಗಳೆಲ್ಲವೂ ನಾಶವಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು. ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಬೀದರ್, ಅಕ್ಟೋಬರ್ 04: ತಾಲೂಕಿನ ಬೆಳ್ಳೂರು ಗ್ರಾಮದ ಬಳಿ ಇರುವ ಕೀರ್ತಿ ವೈರ್ ಮೆಶ್ ಪ್ಲಾಸ್ಟಿಕ್ ಕಚ್ಚಾ ಸಾಮಗ್ರಿ ಸಂಗ್ರಹದ ಗೋದಾಮಿನಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದೆ. ಈ ಘಟನೆಯಿಂದಾಗಿ ಇಡೀ ಗೋದಾಮು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ ಪ್ಲಾಸ್ಟಿಕ್ ಕಚ್ಚಾವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿ ಧಗಧಗನೆ ಹೊತ್ತಿ ಉರಿದ ಪರಿಣಾಮ, ದಟ್ಟ ಹೊಗೆ ಮುಗಿಲೆತ್ತರಕ್ಕೆ ಚಿಮ್ಮಿದ್ದು, ಸುತ್ತಮುತ್ತಲಿನ ವಾತಾವರಣವು ಕಲುಷಿತಗೊಂಡಿತು.

ಅಗ್ನಿ ಅನಾಹುತದಿಂದಾಗಿ ದಟ್ಟ ಹೊಗೆ ಆವರಿಸಿದ್ದರಿಂದ, ಬೆಳ್ಳೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮನೆ ಮಾಡಿತ್ತು. ಬೆಂಕಿಯ ಜ್ವಾಲೆಗಳು ಮತ್ತು ಹೊಗೆಯ ಪ್ರಮಾಣ ಹೆಚ್ಚಾಗಿದ್ದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ದಾವಿಸಿ, ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು. ಹಲವು ಗಂಟೆಗಳ ನಿರಂತರ ಪ್ರಯತ್ನದ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More