ಬೀದರ್: ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ

Edited By:

Updated on: Jul 16, 2026 | 1:55 PM

ಬೀದರ್‌ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಶಾಲೆ ಬಳಿ ದೇಶೀ ನಿರ್ಮಿತ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಐದು ಕಂಟ್ರಿ ಪಿಸ್ತೂಲ್‌ಗಳು, 26 ಜೀವಂತ ಗುಂಡುಗಳು, ಐದು ತಲ್ವಾರ್‌ಗಳು ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪಿಸ್ತೂಲ್ ಮಾರಾಟ ಜಾಲದ ಬಗ್ಗೆ ತನಿಖೆ ಮುಂದುವರೆದಿದೆ.

ಬೀದರ್, ಜುಲೈ 16: ಬೀದರ್‌ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶಾಲೆ ಬಳಿ ದೇಶೀ ನಿರ್ಮಿತ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಂದ ಐದು ಕಂಟ್ರಿ ಪಿಸ್ತೂಲ್‌ಗಳು, 26 ಜೀವಂತ ಗುಂಡುಗಳು, ಐದು ತಲ್ವಾರ್‌ಗಳು ಮತ್ತು ಅಪರಾಧ ಕೃತ್ಯಗಳಿಗೆ ಬಳಸುತ್ತಿದ್ದ ಒಂದು ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ತಂಡವು ಶಾಲೆ ಬಳಿ ಬೈಕ್‌ನಲ್ಲಿಟ್ಟುಕೊಂಡು ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುತ್ತಿತ್ತು.

ಇದರೊಂದಿಗೆ, ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲಕ್ಕೆ ಬ್ರೇಕ್ ಬಿದ್ದಂತಾಗಿದೆ. ಈ ಇಬ್ಬರು ಆರೋಪಿಗಳು ಮಹಾರಾಷ್ಟ್ರ ಮೂಲದವರಾಗಿದ್ದು, ಬೀದರ್‌ನಲ್ಲಿ ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಸದ್ಯ, ಈ ಜಾಲದ ಮೂಲ ಮತ್ತು ಇದರ ಹಿಂದೆ ಇರಬಹುದಾದ ದೊಡ್ಡ ಮಟ್ಟದ ವ್ಯವಹಾರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More